ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ಹಾಗೂ ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ಹಾಗೂ ಅವರ ಪುತ್ರ ಹರೀಶ್ ಅವರಿಗೆ ಫೆ.24ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.

‘ಜಾರಿ ನಿರ್ದೇಶನಾಲಯದ ಸಮನ್ಸ್ ಬಂದಿದ್ದು, ಬೆಂಗಳೂರು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವೆ. ಕೆಲವು ಕಡತ, ದಾಖಲೆ ತರುವಂತೆ ಸೂಚಿಸಿದ್ದು ಅವನ್ನು ತೋರಿಸುವೆ. ವಿಚಾರಣೆಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ಸಿದ್ಧ. ನೂರು ಬಾರಿ ಕರೆದರೂ ಹೋಗುತ್ತೇನೆ’ ಎಂದು ನಂಜೇಗೌಡ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿರುವ ನಂಜೇಗೌಡ ಮನೆ, ಕಚೇರಿ ಹಾಗೂ 14 ಕಡೆ ಇ.ಡಿ ಅಧಿಕಾರಿಗಳು ಈಚೆಗೆ ದಾಖಲೆಗಳನ್ನು ಶೋಧಿಸಿದ್ದರು.

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಯ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) 75 ಹುದ್ದೆಗಳ ನೇಮಕಾತಿ ಹಾಗೂ ಮಾಲೂರು ತಾಲ್ಲೂಕು ಭೂ ಮಂಜೂರಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.