ತೋಟಗಾರಿಕೆ ಮತ್ತು ಕೃಷಿ ಇಲಾಖೆ ಕೂಡಲೇ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು. ಚೆಂಡು ಹೂ ಬೆಳೆಗಾರರು ಹಾಕಿರುವ ಬಂಡವಾಳ ಹಾಗೂ ಶ್ರಮಕ್ಕೆ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದರೆ ರೈತರ ಪರವಾಗಿ ರೈತ ಸಂಘಟನೆ ಹೋರಾಟ ಮಾಡಲಿದೆ.
–ಅಪ್ಪೋಜಿರಾವ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ
ಮಾರುಕಟ್ಟೆಯಲ್ಲಿ ಚೆಂಡು ಹೂವು ಕೆಜಿಗೆ ₹ 10ರಂತೆ ಮಾರಾಟವಾಗುತ್ತಿದೆ. ರೈತರು ಹೂ ಬೆಳೆಯಲು ಹಾಕಿದ ಬಂಡವಾಳವಿರಲಿ, ಹೂ ಕೀಳಲು ಕೊಡಬೇಕಾದ ಕೂಲಿಯ ಹಣವೂ ಸಿಗದೇ ಕಂಗಾಲಾಗಿದ್ದಾರೆ. ಆದ್ದರಿಂದ ಹೂವು ಬೆಳೆಗಾರರ ಹಿತ ದೃಷ್ಟಿಯಿಂದ ಪರಿಹಾರ ನೀಡಬೇಕು
–ಹುಣಸನಹಳ್ಳಿ ವೆಂಕಟೇಶ, ದಲಿತ ರೈತ ಸೇನೆಯ ರಾಜ್ಯಾಧ್ಯಕ್ಷ
ದಸರಾ-ದೀಪಾವಳಿ ಸಂದರ್ಭದಲ್ಲಿ ಚೆಂಡು ಹೂ ಪ್ರತಿ ಕೇಜಿಗೆ ₹150ರಿಂದ 200ವರೆಗೆ ಮಾರಾಟವಾಗಿತ್ತು. ಈಗ ಬೆಲೆ ಕುಸಿದಿದ್ದು, ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈ ಬಗ್ಗೆ ಮೇಲಿನ ಅಧಿಕಾರಿಗಳ ಗಮನಕ್ಕೆ ತರಲಾಗುವುದು.