ಕೆಜಿಎಫ್: ರಾಬರ್ಟಸನ್‌ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಹೇಳಿದರು.

ಮಿನಿ ವಿಧಾನಸೌಧಕ್ಕೆ ಗುರುವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ಮೊದಲ ಅಂತಸ್ತಿನ ಕಾಮಗಾರಿ ಬಹುತೇಕ ಮುಗಿದಿದೆ. ಇನ್ನೊಂದು ವಾರದೊಳಗೆ ಕಚೇರಿಗಳು ಕಾರ್ಯ ನಿರ್ವಹಿಸುವ ಮಟ್ಟಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕಂದಾಯ ಇಲಾಖೆ ಇಲ್ಲಿಗೆ ವರ್ಗಾವಣೆಯಾದ ನಂತರ ಇತರೆ ಇಲಾಖೆಗಳು ಹಂತ ಹಂತವಾಗಿ ವರ್ಗಾವಣೆಯಾಗಲಿವೆ ಎಂದರು.

ಉದ್ಘಾಟನೆಗೆ ಕಂದಾಯ ಸಚಿವರು ಬರುವ ನಿರೀಕ್ಷೆ ಇದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ಜೊತೆ ಸಮಾಲೋಚನೆ ನಡೆಸಿ ಉದ್ಘಾಟನೆಯ ದಿನಾಂಕವನ್ನು ಪ್ರಕಟಿಸಲಾಗುವುದು. ಕಟ್ಟಡದ ಸುರಕ್ಷತೆಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾ ಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್ ಕೆ.ಎನ್. ಸುಜಾತ, ನಗರಸಭೆ ಪೌರಾಯುಕ್ತೆ ಡಾ.ಮಾಧವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.