ಮಾಲೂರು: ಮಾಲೂರು ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಲು ಆಕಾಂಕ್ಷಿಗಳ ನಡುವೆ ಕೆಸರೆರಚಾಟ ನಡೆಯುತ್ತಿದೆ.

ಆಕಾಂಕ್ಷಿ ಹೂಡಿ ವಿಜಯಕುಮಾರ್ ತಮ್ಮ ಪಕ್ಷದ ಸ್ಥಳೀಯ ನಾಯಕರ ವಿರುದ್ಧವೇ ಸಿಡಿದೆದ್ದಿದ್ದಾರೆ. ಇದಕ್ಕೆ ಕಾರಣ ಮುನಿರತ್ನ, ಮುನಿಸ್ವಾಮಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಹಾಗೂ ಈಚೆಗೆ ಪಕ್ಷ ಸೇರಿದ್ದ ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಅವರತ್ತ ಒಲವು ತೋರುತ್ತಿದ್ದಾರೆ ಎಂಬುದು.

ಹೂಡಿ ವಿಜಯಕುಮಾರ್ ಪ್ರಚಾರಕ್ಕೆ ಇಳಿದು ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಮತದಾರರಿಗೆ ಕೊಡುಗೆ ಮೇಲೆ ಕೊಡುಗೆ ನೀಡುತ್ತಿದ್ದಾರೆ.

ಹೊಸದಾಗಿ ನಿರ್ಮಿಸಿದ ತಮ್ಮ ಮನೆಗೆ ‘ಮೋದಿ ನಿವಾಸ’ ಎಂದು ಹೆಸರಿಟ್ಟಿದ್ದಾರೆ.

ಮಾಲೂರು ಕ್ಷೇತ್ರದಲ್ಲಿ ಈ ಹಿಂದೆ ಕೃಷ್ಣಯ್ಯ ಶೆಟ್ಟಿ ಗೆದ್ದಿದ್ದರು. ಬಿಜೆಪಿ ಗೆಲುವಿನ ಅವಕಾಶವಿದ್ದರೂ ಈಗಿನ ಕಿತ್ತಾಟವು ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ವರದಾನ ಆಗಬಹುದು ಎಂಬ ಮಾತು ಕೇಳಿಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.