ಕೆಜಿಎಫ್: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂಬ ಬೆಮಲ್ ಗುತ್ತಿಗೆ ಕಾರ್ಮಿಕರು ಕೋರಿಕೆಗಳ ಸಂಬಂಧ ಆಡಳಿತ ವರ್ಗದ ಜೊತೆಗಿನ ಸಂಧಾನ ಸಭೆಯು ಯಶಸ್ವಿಯಾಗದ ಕಾರಣ ಗುತ್ತಿಗೆ ನೌಕರರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ.

ಕಳೆದ ವರ್ಷದಿಂದ ವೇತನ ಹೆಚ್ಚಳ, ಮತ್ತಿತ್ತರ ಸೌಲಭ್ಯಗಳು, ಸ್ಥಳೀಯರಿಗೆ ಉದ್ಯೋಗಾವಕಾಶ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಮಲ್ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಜೊತೆಗೆ ತಮ್ಮ ಬೇಡಿಕೆಗಳು ಈಡೇರದಿದ್ದರೆ, ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲಾಗುವುದು ಎಂದು ನೋಟಿಸ್ ಅನ್ನೂ ಗುತ್ತಿಗೆ ಕಾರ್ಮಿಕರು ನೀಡಿದ್ದರು ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಬೆಮಲ್ ಕಾರ್ಖಾನೆ ಬಳಿ ಮುಷ್ಕರ ನಡೆಸಲು ಬೆಮಲ್ ಪೊಲೀಸರು ಅವಕಾಶ ನೀಡಲು ನಿರಾಕರಿಸಿದರು. ಇದರಿಂದಾಗಿ ಕಾರ್ಮಿಕರು ಫೈಲೈಟ್ಸ್ ವೃತ್ತದ ಬಳಿ ಮುಷ್ಕರಕ್ಕೆ ಮುಂದಾದರು. ಈ ನಿಟ್ಟಿನಲ್ಲಿ ಸೋಮವಾರ ರಾತ್ರಿ ಪೆಂಡಾಲ್ ಹಾಕಬೇಕಿತ್ತು. ಆದರೆ, ನಡುರಾತ್ರಿ ಬಂದ ಬಿಜಿಎಂಎಲ್ ಭದ್ರತಾ ಸಿಬ್ಬಂದಿ, ಯಾವುದೇ ಮುನ್ಸೂಚನೆ ನೀಡದೆ ಪೆಂಡಾಲ್ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಜೊತೆಗೆ ಪೆಂಡಾಲ್ ಬಟ್ಟೆಗಳನ್ನು ಹರಿದು ಹಾಕಿದ್ದಾರೆ.

ಇದರಿಂದಾಗಿ ಮುಷ್ಕರದಲ್ಲಿ ಭಾಗಿಯಾದ ಸಾವಿರಾರು ಗುತ್ತಿಗೆ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಮಂಗಳವಾರ ಬೆಳಗ್ಗೆಯಿಂದಲೇ ಸುಡುಬಿಸಿಲಿನಲ್ಲಿಯೇ ನಿಂತಿದ್ದರು. ಮತ್ತೊಂದೆಡೆ ತಮ್ಮ ಹೋರಾಟಕ್ಕೆ ಮಣಿದು ಬೆಮಲ್ ಅಧಿಕಾರಿಗಳು ಕರೆ ಮಾಡುತ್ತಾರೆ ಎಂಬ ಕಾತುರದಲ್ಲಿ ಕಾಯುತ್ತಿರುವುದು ಕಂಡುಬಂದಿತು.

ಮತ್ತೊಂದೆಡೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಹಾಯಕ ಜಿಲ್ಲಾಧಿಕಾರಿ ಮಂಗಳಾ, ಬೆಮಲ್ ಸ್ಥಳೀಯ ಘಟಕದ ಮುಖ್ಯಸ್ಥ ಸುಬ್ರಹ್ಮಣ್ಯ, ತಹಶೀಲ್ದಾರ್ ನಾಗವೇಣಿ, ಡಿವೈಎಸ್ಪಿ ಪಾಂಡುರಂಗ, ಗುತ್ತಿಗೆ ನೌಕರರ ಸಂಘದ ಮುಖಂಡರಾದ ದಿವಾಕರನ್, ರಾಜಶೇಖರನ್, ಆಗಸ್ಟಿನ್, ಗಜೇಂದ್ರ, ರಾಜ ಭಾಗವಹಿಸಿದ್ದರು. ವಿಭಾಗೀಯ ಕಾರ್ಮಿಕ ಆಯುಕ್ತರ ಕಚೇರಿಯ ಅಧಿಕಾರಿಗಳು ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

ಕಾರ್ಮಿಕರು ಇಷ್ಟು ದಿನ ಹೋರಾಟವನ್ನು ಶಾಂತಿಯುತವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಮುಂದೆಯೂ ಇದೇ ರೀತಿ ಇರಬೇಕು. ಬೆಮಲ್ ಕೇಂದ್ರ ಸರ್ಕಾರದ ಉದ್ಯಮ. ಅದಕ್ಕೆ ತನ್ನದೇ ಆದ ನೀತಿ ನಿಯಮಗಳು ಇರುತ್ತವೆ. ಅದನ್ನು ಪಾಲಿಸಬೇಕಾಗುತ್ತದೆ. ಬೇರೆಯವರ ಪ್ರಚೋದನೆಗೆ ಒಳಗಾಗಿ ಹೋರಾಟದ ದಾರಿಯನ್ನು ಬೇರೆ ಉದ್ದೇಶಕ್ಕೆ ತೆಗೆದುಕೊಂಡು ಹೋಗಬಾರದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಎಸ್ಪಿ ಕೆ.ಎಂ.ಶಾಂತರಾಜು ತಿಳಿಸಿದರು.

ಖುದ್ದು ಭೇಟಿ ಮಾಡಲು ಬೆಮಲ್ ಅಧಿಕಾರಿಗೆ ತಾಕೀತು

ಕಳೆದ ಒಂದು ವರ್ಷದಿಂದ ತಮ್ಮ ಬೇಡಿಕೆಗಳನ್ನು ಆಡಳಿತ ವರ್ಗದ ಮುಂದಿಡುತ್ತಲೇ ಬಂದಿದ್ದೇವೆ. ಆದರೆ ಇದುವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಕಾರ್ಮಿಕ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ನಡೆಸಿದ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೆಮಲ್ ಸ್ಥಳೀಯ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಕಾರ್ಮಿಕರ ಬೇಡಿಕೆಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಅಧಿಕಾರ ತಮಗೆ ಇಲ್ಲ ಎಂದು ತಿಳಿಸಿದರು. ಆಗ ವರ್ಚುವಲ್ ಸಭೆಯಲ್ಲಿದ್ದ ಕೇಂದ್ರೀಯ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ದುರ್ಗಾಪ್ರಸಾದ್ ಕಾರ್ಮಿಕರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವ ಅಧಿಕಾರಿಯು ಬುಧವಾರ ಬೆಂಗಳೂರಿನಲ್ಲಿರುವ ತಮ್ಮ ಕಚೇರಿಗೆ ಬಂದು ತಮ್ಮನ್ನು ಖುದ್ದಾಗಿ ಭೇಟಿ ಮಾಡಬೇಕು ಎಂದು ತಾಕೀತು ಮಾಡಿದರು. ಈ ವೇಳೆ ಕಾರ್ಮಿಕ ಮುಖಂಡರು ಸಹ ಸಭೆಗೆ ಹಾಜರಾಗಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.