ಕೋಲಾರ: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಪರ್ವ ನಡೆಯುತ್ತಿರುವ ವೇಳೆ ಜಿಲ್ಲೆಯ ಶಾಸಕಕೆ. ಶ್ರೀನಿವಾಸಗೌಡ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಆದರೆ,ತಾವು ಕಂಪನಿಯೊಂದರ ಸಭೆಯ ನಿಮಿತ್ತ ದೆಹಲಿಗೆ ತೆರಳುತ್ತಿರುವುದಾಗಿ ಸುದ್ದಿಗಾರರಿಗೆ ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ, ಮುಂಬೈನತ್ತ ಪಯಣ ಬೆಳೆಸಿದ್ದಾರೆ. ಇದರಿಂದಾಗಿಶಾಸಕ ಕೆ. ಶ್ರೀನಿವಾಸಗೌಡ ಅವರು ಕೂಡ ಅತೃಪ್ತ ಶಾಸಕರ ಗುಂಪನ್ನು ಸೇರಲು ಮುಂಬೈಗೆ ಹೊರಟಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಈ ವದಂತಿಗಳಿಗೆ ಖುದ್ದು ಶ್ರೀನಿವಾಸಗೌಡರೇ ತೆರೆ ಎಳೆದಿದ್ದು, ‘ನಾನು ಇಪ್ಕೋ ಅಧ್ಯಕ್ಷನಾಗಿರುವುದರಿಂದ ಆಡಳಿತ ಮಂಡಳಿ ಸಭೆ ಮತ್ತು ಔತಣಕೂಟವೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿರುವೆ. ನನ್ನ ಬಗ್ಗೆ ಸುಳ್ಳು ವದಂತಿ ಹರಡಲಾಗುತ್ತದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.