ಕೋಲಾರ: ‘ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುಂಟಾಯಿತು. ಒಗ್ಗಟ್ಟು ಇಲ್ಲದ್ದು ಮತ್ತು ಸಂಘಟನೆ ಕೊರತೆಯೇ ಇದಕ್ಕೆ ಕಾರಣ. ಬಿಜೆಪಿ–ಜೆಡಿಎಸ್ ಮೈತ್ರಿ ಪಕ್ಷವು ಇದರ ಲಾಭ ಪಡೆಯಿತು’ ಎಂದು ಕೆಪಿಸಿಸಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಪಾದಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ಪಕ್ಷದಲ್ಲಿ ಒಗ್ಗಟ್ಟು ಇದ್ದರೆ ಹಾಗೂ ಉತ್ತಮ ಸಂಘಟನೆಯಾದರೆ ಯಾವುದೇ ಚುನಾವಣೆಗಳನ್ನು ಗೆಲ್ಲಬಹುದಾದ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ’ ಎಂದರು.

‘ಕೆಪಿಸಿಸಿ ಸತ್ಯಶೋಧನಾ ಸಮಿತಿಯಲ್ಲಿ ಐವರು ಸದಸ್ಯರಿದ್ದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಎಐಸಿಸಿ ಮತ್ತು ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು. ಪ್ರತಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳ ವೈಯುಕ್ತಿಕ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಪಡೆಯಲಾಗುವುದು. ಏನಾದರೂ ವ್ಯತ್ಯಾಸಗಳು, ಭಿನ್ನಾಭಿಪ್ರಾಯ, ಸಮಸ್ಯೆಗಳಿದ್ದಲ್ಲಿ ಮತ್ತೊಮ್ಮೆ ಸಮಿತಿಯ ಕ್ಷೇತ್ರಕ್ಕೆ ಭೇಟಿ ನೀಡಿ ಬಗೆಹರಿಸುವ ಪ್ರಯತ್ನ ಮಾಡಲಿದೆ. ಜೊತೆಗೆ ಪಕ್ಷದ ಸಂಘಟನೆಗೆ ಒತ್ತು ಕೊಡುವ ಜವಾಬ್ದಾರಿಯೂ ಸಮಿತಿಯ ಮೇಲಿದೆ’ ಎಂದು ತಿಳಿಸಿದರು.

ಸಮಿತಿಯ ಸದಸ್ಯ ಆರ್.ಧರ್ಮಸೇನಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಉದಯ್ ಶಂಕರ್, ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಹಿಂದುಳಿದ ವರ್ಗಗಳ ಘಟಕದ ಮಂಜುನಾಥ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರತ್ನಮ್ಮ, ಖಾದ್ರಿಪುರ ಬಾಬು, ರೈತ ಮೋರ್ಚಾ ನಾಗರಾಜ್, ರಾಮಯ್ಯ, ಸಾಧಿಕ್ ಪಾಷ, ವೆಂಕಟಪತ್ಯೆಪ್ಪ, ಶಿವಕುಮಾರ್, ಸೋಮಶೇಖರ್ ಇದ್ದರು.

ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕೆಪಿಸಿಸಿ ಸಮಿತಿ ಸೋಲಿಗೆ ಕಾರಣ ಅರಿಯಲು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಿಂದ ಮಾಹಿತಿ ಸಂಗ್ರಹ ಮುಂಬರುವ ಚುನಾವಣೆಗಳಿಗೆ ಪಕ್ಷ ಸಂಘಟನೆ

ಯಾವ ಕ್ಷೇತ್ರದಲ್ಲಿ ಯಾವ ಕಾರಣಕ್ಕೆ ಸೋಲುಂಟಾಯಿತು ಅಲ್ಲಿನ ನ್ಯೂನತೆಗಳೇನು? ಸರ್ಕಾರದ ಯೋಜನೆಗಳು ತಲುಪಿಲ್ಲವೇ? ಅದನ್ನು ಹೇಗೆ ಸರಿಪಡಿಸಬೇಕು ಎಂಬುದನ್ನು ಅರಿಯಬೇಕಿದೆ
ವಿನಯ್ ಕುಮಾರ್ ಸೊರಕೆ ಅಧ್ಯಕ್ಷ ಕೆಪಿಸಿಸಿ ಸತ್ಯಸೋಧನಾ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.