ಕೋಲಾರ: ಹುತ್ತೂರು ಹೋಬಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಸೀಸಂದ್ರ ಎಸ್.ಎನ್.ರಮೇಶ್ಕುಮಾರ್, ಉಪಾಧ್ಯಕ್ಷರಾಗಿ ನಾರಾಯಣಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬ್ಯಾಂಕಿನ ಉಳಿದ ಅವಧಿಗೆ ಬುಧವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್ಕುಮಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾರಾಯಣಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಚುನಾವಣಾಧಿಕಾರಿ ವೆಂಕಟೇಶ್ಬಾಬು ಅವಿರೋಧ ಆಯ್ಕೆ ಎಂದು ಘೋಷಿಸಿದರು.

ನಿರ್ದೇಶಕರಾದ ನಾರಾಯಣಸ್ವಾಮಿ, ವಿ.ರಾಮು, ಎ.ರಾಜೇಂದ್ರಪ್ರಸಾದ್, ಟಿ.ಬಿ.ಚಂದ್ರಶೇಖರ್, ಎ.ಎಂ.ಶ್ರೀನಿವಾಸಪ್ಪ, ಎನ್.ಕೃಷ್ಣಮೂರ್ತಿ, ಕೆ.ರಮೇಶ್, ಕೆ.ಎಂ.ಅಂಬರೀಶ್, ಅಮರಾವತಿ, ಎಂ.ಚಂದ್ರಶೇಖರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾನಾದಹಳ್ಳಿ ವೈ.ವಿ.ನಾಗರಾಜ್ ಪಾಲ್ಗೊಂಡಿದ್ದರು.

ಅವಿರೋಧ ಆಯ್ಕೆಗೆ ಸಹಕಾರ ನೀಡಿದ ಕೃಷಿಕ ಸಮಾಜ ಹಾಗೂ ರಾಜ್ಯ ಬೀಜ ನಿಗಮದ ನಿರ್ದೇಶಕ ವಡಗೂರು ಡಿ.ಎಲ್.ನಾಗರಾಜ್, ಕೆಂಬೋಡಿ ನಾರಾಯಣಗೌಡ, ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕ ವಿಟ್ಟಪ್ಪನಹಳ್ಳಿ ವೆಂಕಟೇಶ್, ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ತಂಬಿಹಳ್ಳಿ ಮುನಿಯಪ್ಪ, ಚದುಮನಹಳ್ಳಿ ಲಕ್ಷ್ಮಣ್ ಅವರಿಗೆ ಅಧ್ಯಕ್ಷ, ಉಪಾಧ್ಯಕ್ಷರು ಕೃತಜ್ಞತೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.