ಕೋಲಾರ: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ಅರ್ಚಕರ ಘಂಟನಾದ ಶೀರ್ಷಿಕೆ ಭಾಗ-2 ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ಬೆಂಗಳೂರಿನ ಪುರಭವನದಲ್ಲಿ (ಟೌನ್ ಹಾಲ್) ಅ.21 ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಜಿ.ಪರಮೇಶ್ವರ, ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಜಮೀರ್ ಅಹಮದ್ ಖಾನ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೆ.ಎಂ.ನಾಗರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಎಂ.ವಿ.ವೆಂಕಟೇಶ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೂಡು ಜಯಸಿಂಹ, ಒಕ್ಕೂಟದ ಗೌರವ ಪ್ರಧಾನ ಸಲಹೆಗಾರ ಡಾ.ರಾಧಾಕೃಷ್ಣ ಕೆ.ಇ. ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಕೋಲಾರ ಜಿಲ್ಲಾ ಅರ್ಚಕರ ಸಂಘದ ಜಿಲ್ಲಾಧ್ಯಕ್ಷ ಸಿ.ಸೋಮಶೇಖರ್ ದೀಕ್ಷಿತ್, ಕಾರ್ಯದರ್ಶಿ ಮಲ್ಲಿಕಾರ್ಜುನ ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.