ಕೋಲಾರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದಾಗಿಯೇ ಉಪಚುನಾವಣೆಯ ಮೂರೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜನ ನಮ್ಮ ಪರವಾಗಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಾತನಾಡಿ, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರ ಸೇರಿ ಮೂರಕ್ಕೆ ಮೂರೂ ಸ್ಥಾನ ಗೆಲ್ಲುವುದಾಗಿ ಈ ಮೊದಲು ಹೇಳಿದ್ದೆ. ಅಂದುಕೊಂಡಂತೆ ಉತ್ತಮ ಅಂತರದಲ್ಲಿ ಗೆಲುವು ಸಿಕ್ಕಿದೆ. ಇದನ್ನು ವಿರೋಧ ಪಕ್ಷದವರು ಅರ್ಥ ಮಾಡಿಕೊಂಡು ತಮ್ಮ ಕಾರ್ಯವೈಖರಿ ಬದಲಾಯಿಸಿಕೊಳ್ಳಬೇಕು ಎಂದರು.

ಜನ ಕಾಂಗ್ರೆಸ್ ಪರವಾಗಿದ್ದಾರೆ, ಗ್ಯಾರಂಟಿಗಳಿಂದ ನಮಗೆ ಅವರ ಆಶೀರ್ವಾದ ಸಿಕ್ಕಿದೆ. ₹ 56 ಸಾವಿರ ಕೋಟಿಯನ್ನು ಬಡವರ ಕಲ್ಯಾಣಕ್ಕಾಗಿ ನೀಡಿದ್ದೇವೆ. ಕಡುಬಡವರಿಗೆ ನಾವು ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ, ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ನಮಗೆ ಮತ ನೀಡಿದ್ದಾರೆ ಎಂದು ನುಡಿದರು.

ಬಿಜೆಪಿ ಎಷ್ಟೇ ಬೊಬ್ಬೆ ಹೊಡೆದರೂ ಜನರು ಅದಕ್ಕೆ ಮರುಳಾಗಿಲ್ಲ. ರಾಜಕೀಯವಾಗಿ ಬೇರೆ ಬೇರೆ ವಿಚಾರಗಳನ್ನು ಹರಿಬಿಟ್ಟರು. ಜನರು ಅವುಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬುದು ಈ ಫಲಿತಾಂಶದಿಂದ ಗೊತ್ತಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಯೋಜನೆಗಳಿಂದ ನಮಗೆ ಜನಾದೇಶ ಸಿಕ್ಕಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ನಾಲ್ಕೂವರೆ ಕೋಟಿ ಜನರಿಗೆ ತಲುಪಿಸುತ್ತಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ದಿಟ್ಟ ಹೆಜ್ಜೆ ಇಟ್ಟಿದ್ದು ನಮ್ಮ ರಾಜ್ಯ ಸರ್ಕಾರ. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಾರಿ ಮಾಡಿತು. ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿತು. ಎಲ್ಲಾ ವರ್ಗದವರಿಗೆ ಕೆಲಸ, ಆಹಾರ ಸಿಗಬೇಕೆಂಬುದು ಇದರ ಉದ್ದೇಶ ಎಂದು ವಿವರಿಸಿದರು.

ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆ ಭರವಸೆ ಫಲ ನೀಡಲಿಲ್ಲವೇಕೇ ಎಂಬ ಪ್ರಶ್ನೆಗೆ, ‘ಅಲ್ಲಿನ ವಿಚಾರ ನನಗೆ ಗೊತ್ತಿಲ್ಲ. ಶರದ್ ಪವಾರ್ ನೇತೃತ್ವದ ಎನ್ಸಿಪಿ ಇಬ್ಭಾಗವಾಗಿದ್ದರಿಂದ ಸಮಸ್ಯೆ ಆಗಿದೆ. ಇದರಿಂದ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾಗಿದೆ’ ಎಂದರು.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆಯೇ ಎಂಬ ಪ್ರಶ್ನೆಗೆ, ‘ಸಂಪುಟ ಪುನರಚನೆ ಕುರಿತು ಯಾವುದೇ ಚರ್ಚೆ ಆಗಿಲ್ಲ. ಸದ್ಯಕ್ಕೆ ಅಂತಹ ಯಾವುದೇ ನಿರ್ಧಾರ ಆಗಿಲ್ಲ’ ಎಂದು ಹೇಳಿದರು.

ಬಿಜೆಪಿಯವರು ಎಷ್ಟೇ ಬೊಬ್ಬೆ ಹೊಡೆದರೂ ಜನರು ಅದಕ್ಕೆ ಮರುಳಾಗಿಲ್ಲ. ರಾಜಕೀಯವಾಗಿ ಬೇರೆ ಬೇರೆ ವಿಚಾರಗಳನ್ನು ಹರಿಬಿಟ್ಟರು. ಜನರ ಅವುಗಳನ್ನು ಗಣನೆಗೆ ತೆಗೆದುಕೊಂಡಿಲ್ಲ.
ಕೆ.ಎಚ್.ಮುನಿಯಪ್ಪ, ಆಹಾರ ಸಚಿವ

ನಂತರ ಸಚಿವರು ಸಾಯಿಬಾಬಾ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಸಾಯಿಬಾಬಾ ಮಂದಿರದ ಆಡಳಿತ ಮಂಡಳಿಯ ಬಣಕನಹಳ್ಳಿ ನಟರಾಜ್ ಇದ್ದರು.

ವಿರೋಧ ಪಕ್ಷಕ್ಕೆ ಟೀಕಿಸುವುದೇ ಕೆಲಸ

‘ವಿರೋಧ ಪಕ್ಷದವರು ಮಾರ್ಗದರ್ಶನ ಸಲಹೆ ನೀಡುತ್ತಾ ಸರ್ಕಾರದ ಕಣ್ಣು ತೆರೆಸಬೇಕು. ಅಭಿವೃದ್ಧಿ ವಿಚಾರಗಳ ಬಗ್ಗೆ ಹೇಳಬೇಕು ಇಂಥ ಕೆಲಸ ಮಾಡಿಲ್ಲವೆಂದು ಲೋಪದೋಷ ಎತ್ತಿ ಹಿಡಿಯಬೇಕು. ವ್ಯವಸ್ಥಿತವಾಗಿ ಕೆಲಸ ಮಾಡಿದರೆ ಸ್ವಾಗತಿಸುತ್ತೇವೆ. ಆದರೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂದು ನಿತ್ಯ ಒಂದಿಲ್ಲೊಂದು ರೀತಿಯಲ್ಲಿ ಟೀಕೆ ಮಾಡುವುದೇ ಅವರ ಕೆಲಸವಾಗಿದೆ’ ಎಂದು ಕೆ.ಎಚ್.ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ನಿಂದ ವಿಜಯೋತ್ಸವ

ಸಂಡೂರು ಶಿಗ್ಗಾವಿ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ಹಾಗೂ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ನೇತೃತ್ವದಲ್ಲಿ ನಗರದ ಪಕ್ಷದ ಕಚೇರಿ ಮುಂಭಾಗ ಭಾನುವಾರ ಬೆಳಿಗ್ಗೆ 10.30ಕ್ಕೆ ವಿಜಯೋತ್ಸವ ಹಮ್ಮಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.