ಕೋಲಾರ: ಮಾಲೂರು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ ಗೌಡ ವಿರುದ್ಧ ಕೇವಲ 248 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ನ ನಂಜೇಗೌಡ 50,955 ಮತ ಪಡೆದರೆ, ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ ಗೌಡ 50,707 ಮತ ಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಎಣಿಕೆಗೆ ಪಟ್ಟು ಹಿಡಿದ ಕಾರಣ ಚುನಾವಣಾ ನಿಯಮದ ಪ್ರಕಾರ ಅಭ್ಯರ್ಥಿಗಳ ಸಮ್ಮುಖದಲ್ಲಿ ಕ್ಷೇತ್ರದ ಐದು ಮತಗಟ್ಟೆಗಳ ವಿವಿ ಪ್ಯಾಟ್ಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿಕೊಂಡು ಮತ ತಾಳೆ ಮಾಡಲಾಯಿತು. ಆಗಲೂ ಯಾವುದೇ ವ್ಯತ್ಯಾಸ ಕಂಡುಬರಲಿಲ್ಲ. ಆಗ ಚುನಾವಣಾಧಿಕಾರಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದರು.

‘ಮರು ಮತ ಎಣಿಕೆಗೆ ಆಗ್ರಹಿಸಿ ನ್ಯಾಯಾಲಯ ಮೊರೆ ಹೋಗುತ್ತೇನೆ’ ಎಂದು ಮಂಜುನಾಥಗೌಡ ಸುದ್ದಿಗಾರರಿಗೆ ತಿಳಿಸಿದರು.

ವಾಗ್ವಾದ, ತಳ್ಳಾಟ:

ಕೆಲವೇ ಮತಗಳ ಅಂತರದಿಂದ ಸೋಲಾಗಿದೆ ಎಂಬುದು ಗೊತ್ತಾಗುತ್ತಿದಂತೆ ಮತ ಎಣಿಕೆ ನಡೆಯುತ್ತಿದ್ದ ನಗರದ ಬಾಲಕರ ಸರ್ಕಾರಿ ಕಾಲೇಜಿಗೆ ಧಾವಿಸಿ ಬಂದ ಮಂಜುನಾಥಗೌಡ ಹಾಗೂ ಅವರ ಬೆಂಬಲಿಗರು ಮರು ಎಣಿಕೆಗೆ ಪಟ್ಟು ಹಿಡಿದರು. ಇದಕ್ಕೆ ನಂಜೇಗೌಡ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು. ಆಗ ವಾಗ್ವಾದ, ತಳ್ಳಾಟ ನಡೆಯಿತು.

ಸಂಸದ ಎಸ್.ಮುನಿಸ್ವಾಮಿ ಕೂಡ ಬಂದು ಮರು ಎಣಿಕೆ ಮಾಡುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಉಭಯ ಪಕ್ಷದವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಕೇಂದ್ರ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಬಂದು ವಾತಾವರಣ ತಿಳಿಗೊಳಿಸಿದರು.

ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಂಜೇಗೌಡ, ಮಂಜುನಾಥಗೌಡ ಹಾಗೂ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯಕುಮಾರ್ ನಡುವೆ ಮತ ಎಣಿಕೆಯ ಆರಂಭದಂದಿಲೂ ಭಾರಿ ಪೈಪೋಟಿ ಇತ್ತು. ಇದು ಸುಮಾರು 15 ಸುತ್ತುಗಳವರೆಗೂ ಮುಂದುವರೆದಿತ್ತು. ಒಂದೊಂದು ಸುತ್ತಿನಲ್ಲಿ ಒಬ್ಬೊಬ್ಬರು ಮುನ್ನಡೆ ಸಾಧಿಸುತ್ತಿದ್ದರು. ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದ್ದ ಹೂಡಿ ವಿಜಯಕುಮಾರ್ ತಮ್ಮದೇ ಗೆಲುವು ಎಂದು ಸಂಭ್ರಮಿಸಿದ್ದರು. ಕೊನೆಯಲ್ಲಿ ನಂಜೇಗೌಡ ಗೆಲುವಿನ ನಗು ಬೀರಿದರು.

ಬಿಜೆಪಿ ಟಿಕೆಟ್ ಸಿಗದ ಕಾರಣ ಹೂಡಿ ವಿಜಯಕುಮಾರ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದು ಬಿಜೆಪಿಗೆ ಮುಳುವಾಯಿತು.

2018ರಲ್ಲಿ ನಂಜೇಗೌಡ ಮೊದಲ ಬಾರಿ ಗೆದ್ದಿದ್ದರು. 2013ರಲ್ಲಿ ಜೆಡಿಎಸ್ನಿಂದ ಗೆದ್ದು ಶಾಸಕರಾಗಿದ್ದ ಮಂಜುನಾಥಗೌಡ ಕಳೆದ ವರ್ಷ ಬಿಜೆಪಿ ಸೇರಿದ್ದರು. ಆಗಿನಿಂದಲೇ ಮಂಜುನಾಥಗೌಡ ಹಾಗೂ ಹೂಡಿ ವಿಜಯಕುಮಾರ್ ಬೆಂಬಲಿಗರ ನಡುವೆ ಪದೇಪದೇ ಜಗಳ ನಡೆಯುತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.