ಮುಳಬಾಗಿಲು (ಕೋಲಾರ): ನಗರದಲ್ಲಿ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಅನ್ನು ಕೆಲ ಕೆಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು, ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮುಳಬಾಗಿಲು ಪೊಲೀಸರು ಬುಧವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದು, ಬಂಧಿತ ವ್ಯಕ್ತಿಗಳ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ.

'ಯಾರು ಫ್ಲೆಕ್ಸ್ ಹರಿದು ಹಾಕಿದ್ದರೋ ಅವರೇ ಸಾರ್ವಜನಿಕವಾಗಿ ಕ್ಷಮೆ ಕೇಳಿ ಮತ್ತೆ ಫ್ಲೆಕ್ಸ್ ಅಳವಡಿಸಬೇಕು. ಕಿಡಿಗೇಡಿಗಳನ್ನು ಗಡೀಪಾರು ಮಾಡಬೇಕು' ಎಂದು ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಅಯೋಧ್ಯೆಯ ರಾಮಮಂದಿರದಲ್ಲಿ ಜ.22ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬಜರಂಗದಳ, ವಿ ಎಚ್ ಪಿ ಸೇರಿದಂತೆ ವಿವಿಧ ಸಂಘಟನೆಗಳು ನಗರದ ವಿವಿಧೆಡೆ ಕಟೌಟ್ ಹಾಗೂ ಫ್ಲೆಕ್ಸ್ ಅಳವಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.