ಕೋಲಾರ: ಕೊಲೆ ಪ್ರಕರಣ ಸಂಬಂಧ ನಾಗೇಶ್ ಉರುಫ್ ಬಾಬು ಎಂಬಾತನಿಗೆ ಇಲ್ಲಿನ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ₹ 26 ಸಾವಿರ ದಂಡ ವಿಧಿಸಿದೆ.

ತಾಲ್ಲೂಕಿನ ವೇಮಗಲ್ ಹೋಬಳಿಯ ಎಂ.ಮಲ್ಲಾಂಡಹಳ್ಳಿಯ ನಾಗೇಶ್ ಅದೇ ಗ್ರಾಮದ ಗೋಪಾಲಕೃಷ್ಣ ಎಂಬುವರನ್ನು 2019ರ ಮೇ 3ರಂದು ಕೊಲೆ ಮಾಡಿದ್ದ. ಗೋಪಾಲಕೃಷ್ಣ ಮತ್ತು ನಾಗೇಶ್ ನಡುವೆ ಜಗಳವಾಗಿತ್ತು. ಇದರಿಂದ ಕೋಪಗೊಂಡಿದ್ದ ನಾಗೇಶ್, ರಾತ್ರಿ ಮನೆಯ ಮುಂದೆ ಮಲಗಿದ್ದ ಗೋಪಾಲಕೃಷ್ಣ ಅವರ ತಲೆಗೆ ಮರದ ತುಂಡಿನಿಂದ ಹೊಡೆದು ಕೊಲೆ ಮಾಡಿದ್ದ.

ಬಳಿಕ ವೇಮಗಲ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ನಾಗೇಶ್‌ನನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಡಿ.ಪವನೇಶ್ ಅವರು ನಾಗೇಶ್‌ಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.