ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ದೇಹಸ್ಥಿತಿ ಸುಧಾರಿಸಿದ್ದು, ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಕೋವಿಡ್ ಭೀತಿ ಕಾರಣಕ್ಕೆ ಜಾಲಪ್ಪ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಆಸ್ಪತ್ರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಜಾಲಪ್ಪರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಾಲಪ್ಪರ ಆರೋಗ್ಯ ವಿಚಾರಿಸಲು ಭಾನುವಾರ (ಡಿ.12) ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

‘ಶುಕ್ರವಾರಕ್ಕೆ ಹೋಲಿಸಿದರೆ ಜಾಲಪ್ಪ ಅವರ ಆರೋಗ್ಯ ಶನಿವಾರ ಕೊಂಚ ಸುಧಾರಿಸಿದೆ’ ಎಂದು ಸಂಬಂಧಿ ಜಿ.ಎಚ್. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.