ಕೆಜಿಎಫ್: ರಾಬರ್ಟಸನ್‌ಪೇಟೆ ನಗರಸಭೆಯ ನೂತನ ಅಧ್ಯಕ್ಷರಾಗಿ ಇಂದಿರಾಗಾಂಧಿ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಜರ್ಮನ್ ಜೂಲಿಯಸ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಚುನಾಯಿತರಾದರು.

ನಗರಸಭೆಯ 35 ಸದಸ್ಯರ ಪೈಕಿ 14 ಸದಸ್ಯರನ್ನು ಹೊಂದಿದ ಕಾಂಗ್ರೆಸ್ ತನ್ನ ಪಕ್ಷದ ಸದಸ್ಯರ ಜೊತೆಗೆ 15 ಪಕ್ಷೇತರ ಸದಸ್ಯರನ್ನು ಕೂಡ ಸೆಳೆದುಕೊಂಡಿದ್ದರಿಂದ, ಚುನಾವಣೆಯಲ್ಲಿ ಯಾವುದೇ ಪೈಪೋಟಿ ಇರಲಿಲ್ಲ. ಚುನಾಯಿತರಾದ ಇಬ್ಬರೂ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದಾರೆ. ಚುನಾವಣೆಯಲ್ಲಿ ಯಾರ ಹೆಸರನ್ನು ಶಾಸಕಿ ರೂಪಕಲಾ ಸೂಚಿಸುತ್ತಾರೆ ಎಂಬುದು ಗೋಪ್ಯವಾಗಿತ್ತು. ಮುಂಜಾನೆ ನಗರಸಭೆಯಲ್ಲಿ ನಾಮಪತ್ರ ಹಾಕುವ ಸಂದರ್ಭದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಪ್ರಕಟಿಸಲಾಯಿತು. ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ತೀವ್ರ ಪೈಪೋಟಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಶಾಂತಿ ಮತ್ತು ಶಾಲಿನಿ ಅವರ ಹೆಸರು ಪ್ರಧಾನವಾಗಿ ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಇಬ್ಬರ ಹೆಸರನ್ನು ಬದಿಗೊತ್ತಿ ಇಂದಿರಾಗಾಂಧಿ ಅವರ ಹೆಸರನ್ನು ಶಾಸಕಿ ಆಯ್ಕೆ ಮಾಡಿದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.

ಉಪ ವಿಭಾಗಾಧಿಕಾರಿ ಮೈತ್ರಿ ಚುನಾವಣಾಧಿಕಾರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.