ಕೋಲಾರ: ಭ್ರಷ್ಟಾಚಾರ ಮರೆಮಾಚಲು ಹುಲಿ ಉಗುರು ವಿವಾದ ಮುನ್ನೆಲೆಗೆ ತಂದು ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಟೀಕಿಸಿದ್ದಾರೆ.

ತೆರಿಗೆ ಇಲಾಖೆ ದಾಳಿ ವೇಳೆ ಗುತ್ತಿಗೆದಾರರ ಬಳಿ ಸಿಕ್ಕ ₹100 ಕೋಟಿ ಬಗ್ಗೆ ತನಿಖೆ ನಡೆಯಬೇಕಿತ್ತು. ಅದನ್ನು ಮರೆಮಾಚಲು ಹುಲಿ ಉಗುರಿಗೆ ಪ್ರಚಾರ ನೀಡಿ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ನಡೆಯುತ್ತಿದೆ. ಹಾಗಾದರೆ, ಇಷ್ಟು ವರ್ಷಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಮತ್ತು ಡಾ.ಜಿ.ಪರಮೇಶ್ವರ ಅವರ ಪ್ರತ್ಯೇಕ ಗುಂಪುಗಳು ಹುಟ್ಟಿಕೊಂಡಿವೆ. ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಪರಿಸ್ಥಿತಿ ಮನೆಯೊಂದು ನಾಲ್ಕು ಬಾಗಿಲು ಎಂಬಂತಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.