ಕೋಲಾರ: ಹಾಲು ಖರೀದಿ ದರ ಕಡಿತಗೊಳಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ನೊಂದ ಹಾಲು ಉತ್ಪಾದಕರ ವೇದಿಕೆ ಸದಸ್ಯರು ಇಲ್ಲಿ ಮಂಗಳವಾರ ಕೋಚಿಮುಲ್ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

‘ಸಂಕಷ್ಟದ ಪರಿಸ್ಥಿತಿ ನಡುವೆಯೂ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈನೋದ್ಯಮ ನಿರ್ವಹಣೆ ಮಾಡುತ್ತಿದ್ದಾರೆ. ಕೋವಿಡ್‌ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಕೋಚಿಮುಲ್ ಹಾಲು ಖರೀದಿ ದರ ಕಡಿಮೆ ಮಾಡಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಕೃಷಿ ಪ್ರಧಾನ ಜಿಲ್ಲೆಯಲ್ಲಿ ಹೈನೋದ್ಯಮವು ರೈತರ ಬೆನ್ನೆಲುಬು. ಆದರೆ, ಕೋಚಿಮುಲ್ ಆಡಳಿತ ಮಂಡಳಿಯು ನಷ್ಟದ ಸಬೂಬು ಹೇಳಿ ಹಾಲು ಖರೀದಿ ದರ ಕಡಿತಗೊಳಿಸಿದೆ. ಹಿಂದೆ ಲೀಟರ್ ಹಾಲಿಗೆ ₹ 29 ಇದ್ದ ಖರೀದಿ ದರವನ್ನು ₹ 24ಕ್ಕೆ ಇಳಿಸಲಾಗಿದೆ. ಆಡಳಿತ ಮಂಡಳಿಯು ಬಡ ರೈತರ ಹೊಟ್ಟೆಯ ಮೇಲೆ ಬರೆ ಎಳೆದಿದೆ’ ಎಂದು ರೈತ ಸಂಘ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.

‘ಕೋಚಿಮುಲ್‌ನಲ್ಲಿ ಆದಾಯ ಸೋರಿಕೆಯಾಗುತ್ತಿದ್ದು, ಒಕ್ಕೂಟದಲ್ಲಿ ಸದಾ ನಷ್ಟ ತೋರಿಸಲಾಗುತ್ತಿದೆ. ಆದರೆ, ನಷ್ಟಕ್ಕೆ ರೈತರು ಕಾರಣರಲ್ಲ. ಪಶು ಆಹಾರದ ಬೆಲೆ ಕಡಿಮೆ ಮಾಡದೆ ಹಾಲಿನ ದರ ಇಳಿಸಿರುವುದು ಸರಿಯಲ್ಲ. ಒಕ್ಕೂಟದಿಂದ ರೈತರಿಗೆ ಲಾಭ ನೀಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರ ಹಾಲಿಗೆ ಸಹಾಯಧನ ನೀಡುತ್ತಿದೆ ಎಂದು ಹೇಳುತ್ತಾರೆ. ಆದರೆ, ಅದರಿಂದ ಪ್ರಯೋಜನವಿಲ್ಲ. ಪಶು ಆಹಾರ ಹಾಗೂ ಮೇವಿನ ಬೆಲೆ ಗಗನಕ್ಕೇರಿದೆ. ಮೇವಿನ ಸಮಸ್ಯೆಯಿಂದಾಗಿ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿಲ್ಲ. ಘನ ಕೊಬ್ಬಿನ ಅಂಶ (ಎಸ್‌ಎನ್‌ಎಫ್) ಆಧರಿಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಕೊಡುತ್ತಿಲ್ಲ’ ಎಂದು ದೂರಿದರು.

ಆದಾಯ ಸೋರಿಕೆ: ‘ಒಂದು ಲೀಟರ್ ಹಾಲು ಉತ್ಪಾದನೆಗೆ ಅಂದಾಜು ₹ 35 ವೆಚ್ಚವಾಗುತ್ತಿದೆ. ಆದರೆ, ಒಕ್ಕೂಟವು ಉತ್ಪಾದನಾ ವೆಚ್ಚಕಿಂತಲೂ ಕಡಿಮೆ ದರಕ್ಕೆ ಹಾಲು ಖರೀದಿಸಿ ರೈತರನ್ನು ಶೋಷಿಸುತ್ತಿದೆ. ಮತ್ತೊಂದೆಡೆ ಒಕ್ಕೂಟದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆದಾಯ ಸೋರಿಕೆಯಾಗುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ದೇಶದ ಸಂಪತ್ತು ಲೂಟಿ ಮಾಡುವ ಲೂಟಿಕೋರರನ್ನು ಸರ್ಕಾರಗಳು ರಕ್ಷಿಸುತ್ತವೆ. ಆದರೆ, ದೇಶಕ್ಕೆ ಆರ್ಥಿಕ ಸಂಪನ್ಮೂಲ ಕಲ್ಪಿಸುವ ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದರೂ ಸರ್ಕಾರಗಳು ನೆರವಿಗೆ ಧಾವಿಸುವುದಿಲ್ಲ. ಸರ್ಕಾರಗಳಿಗೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ. ಕೋಚಿಮುಲ್ ಆಡಳಿತ ಮಂಡಳಿಗೆ ರೈತರ ಕಷ್ಟದ ಅರಿವಿಲ್ಲ’ ಎಂದು ಗುಡುಗಿದರು.

ಏಕರೂಪ ದರ: ‘ಹಾಲು ಖರೀದಿ ದರ ಕಡಿತದ ಆದೇಶ ಹಿಂಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಮತ್ತು ಖರೀದಿಗೆ ಸಬ್ಸಿಡಿ ನೀಡಬೇಕು. ರಾಜ್ಯದೆಲ್ಲೆಡೆ ಎಲ್ಲಾ ಒಕ್ಕೂಟಗಳಲ್ಲೂ ಹಾಲಿಗೆ ಏಕರೂಪ ಖರೀದಿ ದರ ನಿಗದಿಪಡಿಸಬೇಕು. ಹಾಲು ಉತ್ಪಾದನಾ ವೆಚ್ಚಕ್ಕೆ ತಕ್ಕಂತೆ ಖರೀದಿ ದರ ಹೆಚ್ಚಿಸಬೇಕು. ಒಕ್ಕೂಟದಲ್ಲಿನ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.

‘ಬಿಎಂಸಿ ಕೇಂದ್ರಗಳಲ್ಲಿ ನಡೆಯುವ ಹಾಲು ಕಲಬೆರಕೆ ಅಕ್ರಮ ತಡೆಯಬೇಕು ಮತ್ತು ಗುಣಮಟ್ಟದ ತಾರತಮ್ಯ ಸರಿಪಡಿಸಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರಿಗೆ ಒಕ್ಕೂಟದಿಂದ ವೇತನ ನೀಡಬೇಕು. ಗುಣಮಟ್ಟದ ನೆಪ ಹೇಳಿ ದಂಡ ವಿಧಿಸುವುದನ್ನು ನಿಲ್ಲಿಸಬೇಕು. ಹಾಲಿನ ದರ ಇಳಿಕೆ ಮಾಡುವ ಮುನ್ನ ರೈತ ಮುಖಂಡರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ, ಪ್ರಜಾ ಸಂಘರ್ಷ ಸಮಿತಿ ಸದಸ್ಯರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್. ರೈತ ಸಂಘ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬೈರೇಗೌಡ, ಕಾರ್ಯದರ್ಶಿ ವೀರಭದ್ರಸ್ವಾಮಿ, ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷ ಬೈರರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಎಚ್.ಪಿ.ರಾಮನಾಥ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ.ಉಮಾ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.