ಕೋಲಾರ: 'ಈಚೆಗಿನ ರಾಜಕೀಯ ಬೇಸರ ತರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಮೇಲೆ ಪ್ರಕರಣ ದಾಖಲು ಮಾಡಿದ್ದು ನನಗೆ ನೋವುಂಟು ಮಾಡಿದೆ. ಈಗ ನಡೆಯುತ್ತಿರುವ ಧರ್ಮ ಯುದ್ಧದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ. ಹಾಗಂತ ನಾನೇನೂ ಕಾಂಗ್ರೆಸ್ ಗೆ ಹೋಗಲ್ಲ. ಆದರೆ, ನಾನು ಜಾತಿ ಪ್ರೇಮಿ. ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗಲಿದ್ದು, ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ' ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ತಿಳಿಸಿದರು.

ನಗರದಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಮ್ಮುಖದಲ್ಲಿ ಅವರು ಸಿದ್ದರಾಮಯ್ಯ ಅವರನ್ನು ಕೊಂಡಾಡಿದರು.

'ಸಿದ್ದರಾಮಯ್ಯ ಅವರಿಗೆ ಸ್ವಂತ ಮನೆ ಇಲ್ಲ. ಇನ್ನು ನಿವೇಶನ ತಿನ್ನುತ್ತಾರಾ? ಅವರ ಅಣ್ಣತಮ್ಮಂದಿರು ಚಡ್ಡಿಯಲ್ಲಿ ಇರುತ್ತಾರೆ. ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್ ಇಲ್ಲ. ಅವರಿಲ್ಲದಿದ್ದರೆ ಕಾಂಗ್ರೆಸ್ ಶೂನ್ಯ' ಎಂದರು.

'ನಾನು ಯಾರಿಗೂ ಕೇರ್ ಮಾಡಲ್ಲ. ನನಗೆ ಬೇಕಿರುವುದು ಜಾತಿ ಮಾತ್ರ. ನನ್ನ ಜಮೀನು ಕೂಡ ವಕ್ಫ್ ಎಂದು ನಮೂದಾಗಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.