ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ.

'ಇದೊಂದು ತೀರಾ ಗಂಭೀರವಾದ ವಿಚಾರ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಹೀಗಾಗಿ, ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ' ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ 'ಪ್ರಜಾವಾಣಿ 'ಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

'ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ' ಎಂದರು.

ಇತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ 'ಪ್ರಜಾವಾಣಿ'ಯಲ್ಲಿ ಬಂದ ವರದಿ ಉಲ್ಲೇಖಿಸಿದ್ದಾರೆ.
.Video | ಕೋಲಾರ: ಮಲದ ಗುಂಡಿಗೆ ಮಕ್ಕಳನ್ನು ಇಳಿಸಿದರು..!.ಮಲದ ಗುಂಡಿಗೆ ಮಕ್ಕಳ ಇಳಿಸಿ ಸ್ವಚ್ಛತೆ! ಮಾಲೂರು ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.