ಬಂಗಾರಪೇಟೆ( ಕೋಲಾರ): ವಾಲಿದ್ದ ಮನೆಯು ಶುಕ್ರವಾರ ಏಕಾಏಕಿ ಕುಸಿದು ಬಿದ್ದಿದೆ.

ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು, ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಬೂದಿಕೋಟೆ ರಾಜ್ ಕುಮಾರ್ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ.

ಮುಂಜಾನೆ ಕಟ್ಟಡ ವಾಲುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಮೂರು ಕುಟುಂಬಗಳು ನೆಲೆಸಿದ್ದವು.

ಅಲ್ಲದೇ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಬೆಸ್ಕಾಂ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುತ್ತಮುತ್ತ ಇದ್ದ ಜನರನ್ನು ದೂರ ಕಳುಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.