ಶ್ರೀನಿವಾಸಪುರ (ಕೋಲಾರ): ‘ಸಂವಿಧಾನವನ್ನು ಯಾರು ಬದಲಾವಣೆ ಮಾಡಲು ಹೋಗುತ್ತಾರೋ ಅಂಥವರ ಪ್ರಾಣ ತೆಗೆಯುತ್ತೇವೆ. ಯಾರಾದರೂ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಅಂಥವರನ್ನು ದೇಶದಿಂದಲೇ ಹೊರ ಹಾಕಲು ಹೋರಾಟ ನಡೆಸುತ್ತೇವೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ, ಆರ್ಪಿಐ ರಾಷ್ಟ್ರೀಯ ಅಧ್ಯಕ್ಷ ರಾಮದಾಸ್ ಅಠವಳೆ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಯಲ್ದೂರು ಹೋಬಳಿ ವ್ಯಾಪ್ತಿಯ ಮಲ್ಲಗಾನಹಳ್ಳಿ ಗ್ರಾಮದಲ್ಲಿ ಭಾನುವಾರ ಸಮತಾ ಸೈನಿಕ ದಳ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ ಮತ್ತು ಪರಿವರ್ತನಾ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದವರು ಈಗಾಗಲೇ ಮೂಲೆಗುಂಪಾಗಿದ್ದಾರೆ. ಅಂಬೇಡ್ಕರ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಪಾರ ಗೌರವ ಹೊಂದಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.