ಕೊಪ್ಪಳ: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಾಂಕೇತಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮತ್ತೆ ಹೋರಾಟ ಆರಂಭಿಸುತ್ತೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಆಗಸ್ಟ್ ಕೊನೆಯ ವಾರದಲ್ಲಿ ಬೆಳಗಾವಿಯಿಂದ ಹೋರಾಟ ಆರಂಭಿಸುತ್ತೇವೆ. ನಮ್ಮ ಸಮುದಾಯದ ಎಲ್ಲ ಶಾಸಕರ ಸಭೆ ಕರೆದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಸುತ್ತೇವೆ’ ಎಂದರು.

‘ಶ್ರಾವಣ ನಮಗೆ ಪವಿತ್ರ ಮಾಸ. ತಾಲ್ಲೂಕು ಹಂತದಿಂದ ಚಳವಳಿ ರೂಪದಲ್ಲಿ ಮೀಸಲಾತಿಗಾಗಿ ಹೋರಾಟ ರೂಪಿಸುತ್ತೇವೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು, ನಮ್ಮ ಸಮಾಜವನ್ನು ಯಾರೂ ಕಡೆಗಣಿಸುವಂತಿಲ್ಲ. 2024ರ ಒಳಗೆ ನಮಗೆ ಮೀಸಲಾತಿ ಕೊಡಬೇಕು. 2ಎ ಮೀಸಲಾತಿಗೆ ಕಾನೂನು ತೊಡಕು ಎದುರಾದರೆ ಕೇಂದ್ರದಲ್ಲಿ ಒಬಿಸಿ ಪಟ್ಟಿಯಲ್ಲಾದರೂ ಸೇರಿಸಬೇಕು’ ಎಂದು ಆಗ್ರಹಿಸಿದರು.

’ಈಗಿನ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯದ ಐದು ಜನ ಶಾಸಕರಿಗಾದರೂ ಸಚಿವ ಸ್ಥಾನ ನೀಡುತ್ತದೆ ಎನ್ನುವ ನಿರೀಕ್ಷೆಯಿತ್ತು. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ದುಡಿದವರಿಗೆ ಅವಕಾಶ ಕೊಡಬೇಕು. ಮುಂದೆ ಇನ್ನಷ್ಟು ಶಾಸಕರಿಗೆ ಸಚಿವ ಸ್ಥಾನ ಸಿಗುವ ಭರವಸೆಯಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.