ಕಾರಟಗಿ: 7ನೇ ವೇತನ ಆಯೋಗ ವರದಿ ಜಾರಿಗೊಳಿಸಬೇಕು. ಎನ್ಪಿಎಸ್ ನೌಕರರನ್ನು ಒಪಿಎಸ್ಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಗೆ ಶನಿವಾರ ಮನವಿ ಸಲ್ಲಿಸಿದರು.

ನೌಕರರ ಸಂಘದ ಗಂಗಾವತಿ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಹೇರೂರು ಮಾತನಾಡಿ, ‘7ನೇ ವೇತನ ಆಯೋಗದ ವರದಿಯಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆ ಹಿಂದೆಯೇ ಮಾಡಬೇಕಿತ್ತು. ಪೃಕೃತಿ ವಿಕೋಪ, ಕೋವಿಡ್, ಪ್ರವಾಹ ಸಂದರ್ಭದಲ್ಲಿ ನೌಕರರು ಸರ್ಕಾರಕ್ಕೆ ನೆರವಾಗಿದ್ದಾರೆ. ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಎನ್ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು. ಈ ಬಗ್ಗೆ ಸಚಿವರು ಸಿಎಂ ಗಮನ ಸೆಳೆಯಬೇಕು’ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ವಕ್ಕಳದ, ಪದಾಧಿಕಾರಿಗಳಾದ ಹನುಮಂತಪ್ಪ ಗಿಡ್ಡಿ, ರಾಮಣ್ಣ ಸಿನ್ನೂರು, ಶಿವಶಂಕರ್ ಕಲ್ಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ್ ರ್ಯಾವಳದ ಇತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.