ಕೊಪ್ಪಳ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ಒಳಪಡುವ ವ್ಯಕ್ತಿಗಳಿಗೆ ಬ್ಯಾಂಕ್ ಖಾತೆಯ ಸಮಸ್ಯೆಯಾದರೆ ಅದನ್ನು ಸಂವಿಧಾನ ಜಾಗೃತಿ ಜಾಥಾ ವೇಳೆ ಪರಿಹರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಚಿದಾನಂದ ತಿಳಿಸಿದ್ದಾರೆ.

ಈಗಾಗಲೇ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾ ಫೆ. 23ರ ವರೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ನಿಗದಿತ ಮಾರ್ಗದಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ ಯೋಜನೆಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೊಪ್ಪಳ ತಾಲ್ಲೂಕಿನಲ್ಲಿ ಜಾಥಾ ಸಂಚರಿಸಿದ 39 ಗ್ರಾಮಗಳಿಂದ 158 ಫಲಾನುಭವಿಗಳ ಖಾತೆ ಸರಿಪಡಿಸಿ ಅನ್ನಭಾಗ್ಯ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ತರಲಾಗಿದೆ. ಬಾಕಿ ಉಳಿದ ಅರ್ಹ ಫಲಾನುಭವಿಗಳು ತಮ್ಮ ಗ್ರಾಮದಲ್ಲಿ ಜಾಥಾ ಸಂಚರಿಸುವ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.