ಗಂಗಾವತಿ (ಕೊಪ್ಪಳ ಜಿಲ್ಲೆ): ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಬಳಿಯ ತೋಟಗಾರಿಕೆ ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿರುವ ಮಹೇಶ ಎಚ್. ಸೋಮವಾರ ತಮ್ಮ ಕಚೇರಿಯಲ್ಲಿ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೊಪ್ಪಳ ಲೋಕಾಯುಕ್ತ ಇನ್ಸ್ಪೆಕ್ಟರ್ ವಿಜಯಕುಮಾರ ನೇತೃತ್ವದಲ್ಲಿ ತಂಡ ದಾಳಿ ನಡೆಸಿದ್ದು ಹಣ ವಶಕ್ಕೆ ಪಡೆದುಕೊಂಡಿದೆ.

ಕಾರಟಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಪಂಚಾಕ್ಷರಿ ವೀರನಗೌಡ ಎನ್ನುವವರು ತೋಟಗಾರಿಕೆ ಇಲಾಖೆ ಯೋಜನೆಯಡಿ ಹನಿ ನೀರಾವರಿ ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ ಹಣ ಬಿಡುಗಡೆಗೆ ಕೋರಿದ್ದರು. ಅಧಿಕಾರಿ ₹1 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಿಂದ ರೋಸಿ ಹೋದ ಪಂಚಾಕ್ಷರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚ ಪಡೆಯುವಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.