ಕೊಪ್ಪಳ: ‘ಹಳೆ ಹುಬ್ಬಳ್ಳಿ ಗಲಭೆ ಯಲ್ಲಿ ಪಾಲ್ಗೊಂಡ ಕಿಡಿಗೇಡಿ ಗಳಿಗೆ ಶಾಸಕ ಜಮೀರ್ ಅಹಮ್ಮದ್ ಕಿಟ್ ವಿತರಣೆ ಮಾಡುವುದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಗಲಭೆಯಲ್ಲಿ ಪಾಲ್ಗೊಂಡು ಆರೋಪಿತರಾದವರ ಕುಟುಂಬಕ್ಕೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡುವುದು ಸರಿಯಾದ ಪದ್ಧತಿಯಲ್ಲ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತೆ ಆಗುತ್ತದೆ. ಇದನ್ನು ಕೈಬಿಡಬೇಕು’ ಎಂದು ಅವರು ಆಗ್ರಹಿಸಿದರು.

ಆ್ಯಸಿಡ್ ದಾಳಿ ಪ್ರಕರಣದ ಕುರಿತು ಪೊಲೀಸರು ತ್ವರಿತ ವಿಚಾರಣೆ ನಡೆಸಬೇಕು ಎಂದು ಹೇಳಿದರು.

15 ದಿನಗಳಲ್ಲಿ ಆರೋಪಿಗೆ ಮರಣದಂಡನೆ ಅಥವಾ ಸಾರ್ವಜನಿಕವಾಗಿ ಗಲ್ಲುಶಿಕ್ಷೆ ವಿಧಿಸುವಂತ ಕಾನೂನು ತರಬೇಕು ಎಂದು ಒತ್ತಾಯಿಸಿದರು.

ಪಿಎಸ್ಐ ನೇಮಕಾತಿ ಹಗರಣದ ರೂವಾರಿ ದಿವ್ಯಾ ಹಾಗರಗಿಗೆ ಎಲ್ಲ ಪಕ್ಷಗಳ ನಾಯಕರ ಜತೆ ಪೋಟೊ ತೆಗೆಸಿಕೊಳ್ಳುವ ಚಾಳಿ ಇದೆ. ಈ ಅಕ್ರಮದಲ್ಲಿ ಯಾರೇ ಪಾಲ್ಗೊಂಡಿದ್ದರೂ ತನಿಖೆ ನಡೆಸಿ ಶಿಕ್ಷೆ ನೀಡಬೇಕು. ನಿಜವಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.