ಕೊಪ್ಪಳ: ರಾಜ್ಯದ ಅನೇಕ ಕಡೆ ರೈತರ ಜಮೀನಿನ ಪಹಣಿಯಲ್ಲಿ ನಮೂದಿಸಿರುವ ವಕ್ಫ್ ಹೆಸರು ತೆಗೆದು ಹಾಕಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಪಕ್ಷವು ಓಲೈಕೆ ರಾಜಕಾರಣ ಮಾಡುತ್ತಿದೆ. ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠಮಾನ್ಯಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆದಿದೆ. ಸಿಂದಗಿ ವಿರಕ್ತ ಮಠದ ಭೂಮಿ ನುಂಗಿದ ಸರ್ಕಾರಕ್ಕೆ ಧಿಕ್ಕಾರ, ಸಿದ್ದರಾಮಯ್ಯ-ಜಮೀರ್ ಕುತಂತ್ರಕ್ಕೆ ಧಿಕ್ಕಾರವಿರಲಿ, ವಕ್ಫ್ ಅದಾಲತ್ ಹೆಸರಿನಲ್ಲಿ ರೈತರ ಬಾಯಿಗೆ ಮಣ್ಣು ಹಾಕುತ್ತಿರುವ ಜಮೀರ್ ಕುತಂತ್ರಕ್ಕೆ ಧಿಕ್ಕಾರ ಎನ್ನುವ ಭಿತ್ತಿಪತ್ರಗಳನ್ನು ಬಿಜೆಪಿ ಮುಖಂಡರು ಪ್ರದರ್ಶಿಸಿದರು.

ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು. ‘ನಮ್ಮ ರೈತರ ಆಸ್ತಿ ಪಾಕಿಸ್ತಾನದಿಂದ ಬಂದ ಭೂಮಿ ಅಲ್ಲ. ರೈತರ ಹೊಟ್ಟೆ ಉರಿಸುತ್ತಿರುವ ರಾಜ್ಯ ಸರ್ಕಾರ ಎಂದಿಗೂ ಉದ್ದಾರ ಆಗಲ್ಲ’ ಎಂದು ಹರಿಹಾಯ್ದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ ‘ವಕ್ಫ್ ಆಸ್ತಿ ವಿಚಾರದ ಬಗ್ಗೆ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ನಮ್ಮ ಬೇಡಿಕೆ ಈಡೇರುವ ತನಕ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರ ಆದ್ಯತೆ ಸಮಸ್ಯೆ ಪರಿಹರಿಸಬೇಕು’ ಎಂದು ಆಗ್ರಹಿಸಿದರು. ಸಂಜೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಈ ಹೋರಾಟ ಸ್ಥಳಕ್ಕೆ ಮಧ್ಯಾಹ್ನ ಬಂದ ಮಂಗಳೂರು ಸಂಸ್ಥಾನ ಮಠದ ಸಿದ್ಧಲಿಂಗ ಶಿವಾಚಾರ್ಯರು, ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಮಹಾದೇವ ದೇವರು ಮತ್ತು ಮೈನಳ್ಳಿ ಉಜ್ಜಯಿನಿ ಶಾಖಾಮಠದ ಸಿದ್ದೇಶ್ವರ ಶಿವಾಚಾರ್ಯ ಬೆಂಬಲ ನೀಡಿದರು.

ಶಾಸಕ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಮುಖಂಡರಾದ ಎಚ್. ಗಿರೇಗೌಡ್ರು, ಮಹಾಂತೇಶ ಪಾಟೀಲ ಮೈನಳ್ಳಿ, ಗಣೇಶ ಹೊರತಟ್ನಾಳ, ರಮೇಶ ನಾಡಿಗೇರ, ಸುನಿಲ್ ಹೆಸರೂರ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ರತ್ನಾ ಕುಮಾರಿ, ಶೋಭಾ ನಗರಿ, ಮಹಾಲಕ್ಷ್ಮೀ ಕಂದಾರಿ, ವಾಣಿಶ್ರೀ ಮಠದ, ವೀರೇಶ ಸಾಲೋಣಿ ಸೇರಿದಂತೆ ಅನೇಕರು ಪಾಲ್ಗೊಂಡರು.

Highlights - ಬೆಳಿಗ್ಗೆಯಿಂದ ಸಂಜೆ ತನಕ ಪ್ರತಿಭಟನೆ ವಕ್ಫ್ ಆಸ್ತಿ; ಗಂಭೀರವಾಗಿ ಪರಿಗಣಿಸಲು ಆಗ್ರಹ ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Quote - ವಕ್ಫ್ ಆಸ್ತಿ ವಿಷಯದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ತಾರ್ಕಿಕ ಅಂತ್ಯ ಕಾಣಿಸುವ ತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆ. ನವೀನ ಗುಳಗಣ್ಣನವರ ಬಿಜೆಪಿ ಜಿಲ್ಲಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.