ಕೊಪ್ಪಳ: ‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಆದಷ್ಟು ಬೇಗನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಮಕ್ಕಳ ಆರೈಕೆದಾರರ ತರಬೇತಿ ಪಡೆದು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮೀಣ ಶಿಶುಪಾಲನಾ ಕೇಂದ್ರಗಳ ಮಕ್ಕಳ ಆರೈಕೆದಾರರಿಗೆ ಏರ್ಪಡಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಆ. 15ರಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದರು.

‘ಮಕ್ಕಳ ಆರೈಕೆದಾರರಿಗೆ ಅವರ ಜಾಬ್‌ಕಾರ್ಡ್ ಮೂಲಕ ಗೌರವಧನ ಪಾವತಿಸಲಾಗುತ್ತದೆ. ತರಬೇತಿ ಅವಧಿಯಲ್ಲಿ ಮಾಸ್ಟರ್ ಟ್ರೈನರ್‌ಗಳು ಮಾರ್ಗದರ್ಶನ ಮಾಡಲಿದ್ದಾರೆ. ಆರೈಕೆದಾರರು ಅಗತ್ಯವಾದ ದಾಖಲಾತಿ ನಿರ್ವಹಿಸುವ ಉದ್ದೇಶದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಕಾಲಕಾಲಕ್ಕೆ ಮೇಲಧಿಕಾರಿಗಳು ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಲಿದ್ದು ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿರು.

ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ. ಮಾತನಾಡಿ ‘ಎಲ್ಲರೂ ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಆರೈಕೆದಾರರು ವೈಯಕ್ತಿಕ ಗಮನಹರಿಸಿ ಮಕ್ಕಳನ್ನು ಆರೈಕೆ ಮಾಡಬೇಕು’ ಎಂದರು.

ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತರಬೇತಿಯ ಮಾಸ್ಟರ್ ಟ್ರೈನರ್‌ಗಳಾದ ಜಯಶ್ರೀ, ಹಿರಿಯ ಮೇಲ್ವಿಚಾರಕಿ ಭುವನೇಶ್ವರಿ, ಗಂಗಾಧರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.