ಕೊಪ್ಪಳ: ಮುಂದಿನ ನಾಲ್ಕು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಅವರನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಇರುವುದು ಮೋದಿ ಒನ್ ಮ್ಯಾನ್ ಶೋ ಮಾತ್ರ. ಮೋದಿ ಸರ್ವಾಧಿಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಚಿವ ಸ್ಥಾನದ ಆಸೆಯಿಲ್ಲ, ಸಚಿವ ಸ್ಥಾನಕ್ಕಿಂತಲೂ ಹೆಚ್ಚಿನ ಅವಕಾಶ ಪಡೆದಿದ್ದೇನೆ, ಎಲ್ಲಿಯೇ ಆಗಲಿ, ಅಭ್ಯರ್ಥಿ ಯಾರೇ ಆಗಿರಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ಸಿದ್ದರಾಮಯ್ಯ ಉಳಿದ ಅವಧಿಗೆ ಮುಖ್ಯಮಂತ್ರಿ ಆಗಿರಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.