ಕಾರಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡ ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.

ಸಿದ್ದಾಪುರದ ಶರಣಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ಸುಫಿಯಾ ಎಂ.ಡಿ. ಗುಲಾಂ (12) ಮೃತ ಬಾಲಕಿ.

‘ಬಾಲಕಿಗೆ ನಮ್ಮಲ್ಲಿ ಚಿಕಿತ್ಸೆ ನೀಡಿಲ್ಲ. ಸಿಂಧನೂರಿನಲ್ಲಿ ಪರೀಕ್ಷಿಸಿದಾಗ ಡೆಂಗಿ ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. ವೈದ್ಯರ ಸಲಹೆಯಂತೆ ಬಳ್ಳಾರಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಳಿರಕ್ತ ಕಣಗಳು ತೀರಾ ಕಡಿಮೆಯಾಗಿದ್ದವು. ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ’ ಎಂದು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರಣಪ್ಪ ಚಕೋತಿ ಪ್ರತಿಕ್ರಿಯಿಸಿದ್ದಾರೆ.

‘ಸುಫಿಯಾ ಶನಿವಾರ ಶಾಲೆಗೆ ಬಂದಿದ್ದಳು. ಜ್ವರದಿಂದ ಬಳಲುತ್ತಿದ್ದ ಸುಫಿಯಾಗೆ ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು’ ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ್ ನೀರಗಂಟಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.