ಗಂಗಾವತಿ : ಹೆಣ್ಣು ಮಗು ಹುಟ್ಟಿದ ಕಾರಣಕ್ಕಾಗಿ ಗುರುವಾರ ತಾಯಿಯೇ ತನ್ನ ನವಜಾತ ಹೆಣ್ಣು ಶಿಶುವನ್ನು ಮುಳ್ಳಿನ ಕಂಟಿಯಲ್ಲಿ ಎಸೆದು ಹೋದ ಘಟನೆ ಗಂಗಾವತಿ ತಾಲ್ಲೂಕಿನ ಮರಳಿ (ಪ್ರಗತಿ ನಗರ) ಗ್ರಾಮದಲ್ಲಿ ನಡೆದಿದೆ.

ಬೆಳಗಿನ ಜಾವ ನವಜಾತ ಶಿಶು ಅಳುವುದನ್ನು ಕಂಡ ಸ್ಥಳೀಯರು ಶಿಶುವನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನವಜಾತ ಶಿಶುವಿಗೆ ಸದ್ಯಕ್ಕೆ ಗಂಗಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವನ್ನು ನಮ್ಮ ಸುಪರ್ದಿಗೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಪ್ರಜಾವಾಣಿಗೆ ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.