ಗಂಗಾವತಿ (ಕೊಪ್ಪಳ ಜಿಲ್ಲೆ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣವನ್ನು ಬುಧವಾರ ಎಣಿಕೆ ಮಾಡಲಾಗಿದ್ದು, ಹಲವು ದೇಶಗಳ ಹಣ ಸಂಗ್ರಹವಾಗಿವೆ.

ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ನೇತೃತ್ವದಲ್ಲಿ ಅಂಜನಾದ್ರಿ ದೇವಸ್ಥಾನ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಮಾರ್ಚ್ 27ರಿಂದ ಮೇ 21ರವರೆಗೆ ₹30,21,253 ಸಂಗ್ರಹವಾಗಿದೆ.

ಇದರಲ್ಲಿ ಐದು ವಿದೇಶಿ ನಾಣ್ಯಗಳು ದೊರೆತಿದ್ದು ಪಾಕಿಸ್ತಾನ, ಮೊರಾಕ್ಕೊ, ಯುಎಸ್ಎ, ಶ್ರೀಲಂಕಾ, ನೇಪಾಳದ ತಲಾ ಒಂದೊಂದು ನಾಣ್ಯಗಳು ಸಂಗ್ರಹವಾಗಿವೆ. ಈ ಹುಂಡಿ ಎಣಿಕೆ ಕಾರ್ಯವು ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಸಲಾಯಿತು.

ಶಿರಸ್ತೇದಾರ ರವಿಕುಮಾರ ನಾಯಕವಾಡಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ , ಮಹೇಶ ದಲಾಲ, ಹಾಲೇಶ ಗುಂಡಿ, ತಹಶೀಲ್ದಾರ್ ಕಚೇರಿ ಸಿಬ್ಬಂದಿ ಶ್ರೀಕಂಠ, ಗುರುರಾಜ, ಇಂದಿರಾ, ಅನ್ನಪೂರ್ಣ, ಕವಿತಾ ಕೆ, ಸುಧಾ, ಸೌಭಾಗ್ಯ, ಕವಿತಾ, ಸೈಯದ್ ಮುರ್ತುಜಾ, ಶ್ರೀರಾಮಜೋಶಿ, ಪವನಕುಮಾರ ನಿಲೋಗಲ್, ಸಣಾಪುರ ಪಿಕೆಜಿಬಿ ಬ್ಯಾಂಕ್ ಸಿಬ್ಬಂದಿ ಸುನೀಲ್, ರಾಜಶೇಖರ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ, ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.