ಕನಕಗಿರಿ (ಕೊಪ್ಪಳ): ನಾನು ಸಚಿವನಾಗದಿದ್ದರೂ ಪರವಾಗಿಲ್ಲ, ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಇಲ್ಲಿ ನಡೆಯುತ್ತಿರುವ ಕನಕಗಿರಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಈಗಿನ ರಾಜಕಾರಣದಲ್ಲಿ ಧರ್ಮ, ಜಾತಿ ಹಾಗೂ ಹಣವೇ ಮೇಲಾಗಿದೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಸಮರ್ಥ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇದು ನಮ್ಮ ಭಾಗ್ಯ ಎಂದರು.

ಜಾತ್ಯತೀತ ನಾಯಕರಾದ ಸಿದ್ದರಾಮಯ್ಯ ಅವರ ಹೃದಯ ಬಡವರ, ನೊಂದವರ ಪರ ಇದೆ. ಹೀಗಾಗಿ ಅವರನ್ನು ಕಂಡರೆ ಕೆಲವರಿಗೆ ಆಗಿ ಬರುವುದಿಲ್ಲ. ಮುಖ್ಯಮಂತ್ರಿ ಹೃದಯವಂತರು ಎನ್ನುವುದನ್ನು ಅವರ ಎದುರು ಹೇಳುವ ಅಗತ್ಯವಿಲ್ಲ. ಆದರೆ ಸತ್ಯ ಹೇಳಲು ಹಿಂದೇಟು ಹಾಕುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.