ಕೊಪ್ಪಳ: ತಾಲ್ಲೂಕಿನ ಕವಲೂರು ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡಲು ಶನಿವಾರ ತೆರಳಿದ್ದ ಅವರ ಸಹೋದರರೂ ಆದ ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಎದುರು ಯುವಕರು ‘ಜೈ ಶ್ರೀರಾಮ್’ ಘೋಷಣೆ ಕೂಗಿದರು.

ಶಾಸಕ ಹಿಟ್ನಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಬರುವಾಗ ಯುವಕರು ಏಕಾಏಕಿ ಘೋಷಣೆ ಕೂಗಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಗಲಿಬಿಲಿಗೊಂಡರು.

ಇದರಿಂದ ಆಕ್ರೋಶಗೊಂಡ ಕೆಲ ಕಾಂಗ್ರೆಸ್ ಮುಖಂಡರು ಘೋಷಣೆ ಕೂಗಿದ ಯುವಕರೊಂದಿಗೆ ವಾಗ್ವಾದಕ್ಕಿಳಿದರು. ಸ್ಥಳದಲ್ಲಿಯೇ ಇದ್ದರೆ ಗಲಾಟೆ ಹೆಚ್ಚಾಗುತ್ತದೆ ಎಂದು ಭಾವಿಸಿದ ಶಾಸಕರು ಅಲ್ಲಿಂದ ಕಾಲ್ಕಿತ್ತರು. ಶಾಸಕರು ತೆರಳಿದ ಬಳಿಕ ವಾಗ್ವಾದ ಮುಂದುವರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.