ಕೊಪ್ಪಳ: ‘ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಾಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳು ಸೂಕ್ತ ವೇದಿಕೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್. ಹೇಳಿದರು.

ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲ್ಲೂಕಿನ ಕಿನ್ನಾಳದ ಸರ್ಕಾರದ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಿನ್ನಾಳದಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕರಕುಶಲ ಕಲೆಗಳ ತವರೂರು ಕಿನ್ನಾಳ ಗ್ರಾಮ ಕಲೆ, ಸಾಂಸ್ಕೃತಿಕ, ಸಾಹಿತ್ಯಕ್ಕೆ ಪ್ರಸಿದ್ಧಿ ಪಡೆದಿದೆ’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಹನುಮಂತಪ್ಪ ಕೋವಿ ಮಾತನಾಡಿ ‘ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳ ಮೂಲಕ ಶಾಲಾ ಶಿಕ್ಷಣ ಇಲಾಖೆ ಮಾಡುತ್ತಿರುವುದರಿಂದ ಹೊಸಪ್ರತಿಭೆಗಳು ಹೊರ ಹೊಮ್ಮುತ್ತಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರಿಯಮ್ಮ ಉಪ್ಪಾರ, ಸದಸ್ಯ ಪ್ರಶಾಂತ ಕುಲಕರ್ಣಿ, ಎಸ್ಡಿಎಂಸಿ ಅಧ್ಯಕ್ಷ ಪರುಶುರಾಮ ಎಲೆಅಡಿಕೆ, ಸುಮಲತಾ ಸಜ್ಜನ, ಉಪ ಪ್ರಾಚಾರ್ಯೆ ಕಸ್ತೂರಿ ಕಡೇಮನಿ, ಧರ್ಮಣ್ಣ ಮೇಟಿ, ಸಣ್ಣೆಪ್ಪ ಕಾರಬಾಳೆ, ಪಿಡಿಒ ಪರಮೇಶ್ವರಯ್ಯ, ಸದಸ್ಯರಾದ ಬಸವರಾಜ ಪಲ್ಲೇದ, ಕನಕಪ್ಪ ಕನಕಾಪೂರ, ಪರುಶುರಾಮ ಪಾಗಿ, ಮಂಜುನಾಥ ಹಣಗಿ, ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಕಾಲೇಜಿನ ಪ್ರಾಚಾರ್ಯ ವಾಸುದೇವ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.