ಕೊಪ್ಪಳ: ತಾಲ್ಲೂಕಿನ ಗಿಣಿಗೇರಾ ಗ್ರಾಮದ ಹತ್ತಿರವಿರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ನೌಕರರು ಮತ್ತು ಕಾರ್ಮಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ದುಂಡಪ್ಪ ತುರಾದಿ ಮಾತನಾಡಿ ‘ಮೇ 10ರಂದು ವಿಧಾನಸಭಾ ಚುನಾವಣೆ ಜರುಗಲಿದ್ದು, ನೌಕರರು ಮತ್ತು ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಗಿಣಿಗೇರಾ ಗ್ರಾಮದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಈ ಬಾರಿಯೂ ಅದೇ ರೀತಿ ಆಗಬಾರದು’ ಎಂದರು.

‘ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮತದಾನ ನಮಗೆ ಸಂವಿಧಾನ ಕಲ್ಪಿಸಿರುವ ವಿಶೇಷ ಹಾಗೂ ಅಮೂಲ್ಯ ಹಕ್ಕಾಗಿದ್ದು, ಅದನ್ನು ವಿವೇಚನಾಯುಕ್ತವಾಗಿ ಅರ್ಹರಿಗೆ ಕಡ್ಡಾಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡಬೇಕು’ ಎಂದು ಹೇಳಿದರು.

ಸ್ವೀಪ್ ಚಟುವಟಿಕೆಗಳ ನೋಡಲ್ ಅಧಿಕಾರಿ ಹನಮಂತಪ್ಪ ಎಚ್. ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಖಾನೆ ಆವರಣದಲ್ಲಿ ಇವಿಎಂ, ವಿವಿ ಪ್ಯಾಟ್ ಮೂಲಕ ನೌಕರರು ಮತ್ತು ಕಾರ್ಮಿಕರು ಮತದಾನ ಮಾಡುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿಕೊಡಲಾಯಿತು. 100 ಅಡಿ ಉದ್ದದ ಬ್ಯಾನರ್ನಲ್ಲಿ ಚುನಾವಣಾ ಜಾಗೃತಿಗೆ ಇದ್ದ ಎರಡು ಮಾಹಿತಿಗಳನ್ನು ಪ್ರದರ್ಶಿಸಲಾಯಿತು.

ಕಾರ್ಖಾನೆಯ ಉಪಾಧ್ಯಕ್ಷ ದತ್ತಾತ್ರೇಯ ಮೋಠೆ, ಸಹಾಯಕ ವ್ಯವಸ್ಥಾಪಕ ಮುಖ್ಯಸ್ಥ ಫ್ರಭು ಕೊಪ್ಪದ, ಕೊಪ್ಪಳ ತಾಲ್ಲೂಕು ಪಂಚಾಯಿತಿಯ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್., ತಾಲ್ಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ ಹೂಗಾರ, ಎಸ್.ಬಿ.ಎಂ ಸಮಾಲೋಚಕಿ ಬಸಮ್ಮ ಹುಡೇದ, ಐಇಸಿ ಸಂಯೋಜಕ ದೇವರಾಜ ಪತ್ತಾರ, ಸ್ವೀಪ್ ತಂಡದ ಸದಸ್ಯರಾದ ಬಸವರಾಜ ಬಳಿಗಾರ, ಪೂರ್ಣೆಂದ್ರಸ್ವಾಮಿ, ಕಾರ್ಯದರ್ಶಿ ಮಂಜುನಾಥ ಅಂಗಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.