ಕುಕನೂರು (ಕೊಪ್ಪಳ): ದೇಶ ವಿರೋಧಿ ಚಟುವಟಿಕೆಗಳಿಗೆ ಹಾಗೂ ಭಯೋತ್ಪಾದಕರಿಗೆ ನೆರವು ನೀಡುವ ಕಾಂಗ್ರೆಸ್ ಕಳ್ಳರ ಸಂತೆಯಾಗಿದ್ದು, ಕತ್ತೆಗೂ ಆ ಪಕ್ಷದ ಸಹವಾಸ ಬೇಡವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.

ಜಿಲ್ಲೆಯ ಕುಕನೂರಿನಲ್ಲಿ ಮಂಗಳವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಪೇಜ್ ಪ್ರಮುಖರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪರ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಜನವಿರೋಧಿ, ದೇಶವಿರೋಧಿ ಕೆಲಸ ಮಾಡಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಭ್ರಷ್ಟಾಚಾರಿಗಳ ಪರವಾಗಿದೆ. ಸಿದ್ದರಾಮಯ್ಯ ಜನತಾದಳದಲ್ಲಿ ಬ್ರೋಕರ್ ಕೆಲಸ ಮಾಡಿದ ಅದೇ ಪಕ್ಷದ ನಾಯಕರನ್ನು ತುಳಿದು ಕಾಂಗ್ರೆಸ್ಗೆ ಬಂದು ಸೋನಿಯಾ ಗಾಂಧಿ ಕಾಲು ಹಿಡಿದು ಮುಖ್ಯಮಂತ್ರಿ ಆದರು ಎಂದು ಆರೋಪಿಸಿದರು.

2024ರಲ್ಲಿ ಆಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಆಗುತ್ತದೆ. ಅದಕ್ಕೂ ಮೊದಲು ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿ ಆಗುತ್ತದೆ. ಬಿಜೆಪಿಗೆ ಅಂಜನಾದ್ರಿ ಹಾಗೂ ದತ್ತಮಾಲಾ ಇಬ್ಬರೂ ಭಕ್ತರು ಬೇಕು. ಕಾಂಗ್ರೆಸ್ ಪಕ್ಷಕ್ಕೆ ಟಿಪ್ಪು ಸುಲ್ತಾನ್ ಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.