ಕೊಪ್ಪಳ: ರಾಜ್ಯ ಸರ್ಕಾರ ಈ ಸಲದ ಬಜೆಟ್ನಲ್ಲಿ ಘೋಷಿಸಿದಂತೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ತಯಾರಿಸಲು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ)ದ ತಂಡದ ಸದಸ್ಯರು ಗುರುವಾರ ಇಲ್ಲಿಗೆ ಭೇಟಿ ನೀಡಿದರು.

ಕೊಪ್ಪಳ ತಾಲ್ಲೂಕಿನ ತಾಳಕನಕಪುರ, ಬುಡಶೆಟ್ನಾಳ್, ಹಟ್ಟಿ ಮತ್ತು ಕಲಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಗುರುತಿಸಿರುವ 382 ಎಕರೆ, ವಗದನಾಳ ಹಾಗೂ ಕುಕನೂರು ತಾಲ್ಲೂಕಿನ ಲಕಮಾಪುರ ಗ್ರಾಮ ವ್ಯಾಪ್ತಿಯಲ್ಲಿ ಗುರುತಿಸಿದ 352 ಎಕರೆ ಜಮೀನಿನಲ್ಲಿ ತಂಡ ಪರಿಶೀಲನೆ ನಡೆಸಿತು.

ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಂಡದ ಸದಸ್ಯರು ಕಾರ್ಯಸಾಧ್ಯತಾ ವರದಿಯನ್ನು ಮೂರು ವಾರಗಳ ಒಳಗೆ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ತಂಡದಲ್ಲಿ ಅಭಿಜಿತ್ ಬ್ಯಾನರ್ಜಿ, ಶೈಲೇಂದ್ರ ಮಾರ್ಕ್, ತರುಣ್ ಕುಮಾರ್ ಗುಪ್ತಾ, ಶಕೀಬ್ ಅಫ್ತಾಬ್ ಆಲಂ ಹಾಗೂ ಎನ್. ಮೋಹನ್ ಇದ್ದರು.

‘ಜಿಲ್ಲೆ ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದಿದ್ದು, ಇಲ್ಲಿನ ಉತ್ಪನ್ನಗಳನ್ನು ಹೊರ ರಾಜ್ಯ ಹಾಗೂ ದೇಶಗಳಿಗೆ ಕಳುಹಿಸಲು ವಿಮಾನ ನಿಲ್ದಾಣ ಅಗತ್ಯವಿದೆ. ಜಿಲ್ಲೆಯ ಪಕ್ಕದಲ್ಲಿ ವಿಶ್ವ ಪ್ರಸಿದ್ಧ ಹಂಪಿಯಿದೆ. ವಿಮಾನ ಸೌಲಭ್ಯ ಕಲ್ಪಿಸಿದರೆ ಪ್ರವಾಸಿಗರಿಗೂ ಅನುಕೂಲವಾಗುತ್ತದೆ‘ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಂಡಕ್ಕೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.