ಕೊಪ್ಪಳ: ರಾಜ್ಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಯುತ್ತಿರುವ ಪರೀಕ್ಷೆಗಳಲ್ಲಿ ಸಾಕಷ್ಟು ಅಕ್ರಮದ ವಾಸನೆ ಕೇಳಿ ಬರುತ್ತದೆ. ಆದ್ದರಿಂದ ಭಾನುವಾರ ನಗರದಲ್ಲಿ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಪೂರ್ಣ ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ಶಾಕ್ ನೀಡಿದ್ದಾರೆ.

ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನೀಡಿಲ್ಲ. ಆದ್ದರಿಂದ ಅಂಗಿಯ ಪೂರ್ಣ ತೋಳು ಇದ್ದವರು ಅದನ್ನು ಕತ್ತರಿಸಿ ಹೊರಗಡೆ ಇಟ್ಟು ಪರೀಕ್ಷೆ ಬರೆದಿದ್ದಾರೆ.

ಕೊಪ್ಪಳದ ಭಾಗ್ಯನಗರದ ನವಚೇತನ ಪಬ್ಲಿಕ್ ಶಾಲೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ.

ಪೂರ್ಣ ತೋಳಿನ ಅಂಗಿ ಧರಿಸಿ ಬಂದವರಿಗೆ ಬೇರೆ ಶರ್ಟ್ ಧರಿಸಿ ಬರುವಂತೆ ಸೂಚಿಸಲಾಗಿದೆ. ದೂರದ ಊರುಗಳಿಂದ ಬಂದವರಿಗೆ ಬದಲಿ ಶರ್ಟ್ ಇಲ್ಲದಿದ್ದರೆ, ತೋಳು ಕತ್ತರಿಸಿಕೊಂಡು ಒಳಬರುವಂತೆ ತಿಳಿಸಿದ್ದಾರೆ. ಇಲ್ಲದಿದ್ದರೆ ಒಳ ಬಿಡುವುದಿಲ್ಲವೆಂದು ನಿಷೇಧ ಹೇರಿದ್ದಾರೆ.

ಅನಿವಾರ್ಯವಾಗಿ ಅಭ್ಯರ್ಥಿಗಳು ತೋಳು ಕತ್ತರಿಸಿಕೊಂಡು ಒಳ ಹೋಗಿದ್ದಾರೆ. ಕೆಲವರು ಬೇರೆ ಅಂಗಿ ಖರೀದಿಸಿ ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಜಿಲ್ಲಾದ್ಯಂತ 22 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.