ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಬುಧವಾರ ರಾಷ್ಟ್ರೀಯ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮ ನಡೆಯಿತು.

ಜಿಲ್ಲೆಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಎಲ್ಇಡಿ ವಾಹನಕ್ಕೆ ಜಿಲ್ಲಾಧಿಕಾರಿ ನಲಿನ್ ಅತುಲ್ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ‘ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಸಮಸ್ಯೆಗಳು ಕಾಡಬಹುದು. ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ. ಮಾತನಾಡಿ ‘ತಂಬಾಕಿನಲ್ಲಿ ನಿಕೊಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 4000 ರಿಂದ 7000 ಅಪಾಯಕಾರಿ ರಾಸಾಯಿನಿಕ ತಂಬಾಕು ಪದಾರ್ಥಗಳು ಹೊಂದಿರುತ್ತವೆ. ಪ್ರತಿ ವರ್ಷ ವಿಶ್ವದಾದ್ಯಂತ ಲಕ್ಷಾಂತರ ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ದೇಶದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.