ಕೊಪ್ಪಳ: ಭಾರತ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಅವರು ಗುರುವಾರ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿರುವ ಸ್ಟ್ರಾಂಗ್ ರೂಮ್‌ಗೆ ಭೇಟಿ ನೀಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 7ರಂದು ನಡೆದ ಮತದಾನದ ಬಳಿಕ ಮತಯಂತ್ರಗಳಲ್ಲಿ ಇಲ್ಲಿ ಭದ್ರತಾ ಸರ್ಪಗಾವಲಿನ ನಡುವೆ ಇರಿಸಲಾಗಿದೆ. ಮತಯಂತ್ರಗಳಿಗೆ ಒದಗಿಸಲಾದ ಭದ್ರತೆ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ ಮತ್ತು ಭದ್ರತಾ ಸಿಬ್ಬಂದಿಗಳ ಕುರಿತು ಅವರು ಪರಿಶೀಲಿಸಿದರು. ಬಳಿಕ ಇನ್ನಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಡಿಎಸ್‌ಪಿ ಮುತ್ತಣ್ಣ ಸವರಗೋಳ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.