ಕೊಪ್ಪಳ: 'ಭಾರತದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಸಿಗುವ ಸ್ಥಿತಿ ಮೂಡಿದಾಗ ಮೀಸಲಾತಿ ತೆಗೆದುಹಾಕುವ ಬಗ್ಗೆ ಪಕ್ಷ ಆಲೋಚಿಸಲಿದೆ' ಎಂದು ರಾಹುಲ್ ಗಾಂಧಿ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಮಾನತೆ ಬರುವ ತನಕ ಮೀಸಲಾತಿ ಇರಬೇಕು ಎಂದು ಅವರು ಹೇಳಿದ್ದನ್ನೇ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಟೀಕಿಸುವ ಬಿಜೆಪಿ ಈಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸಲಿ’ ಎಂದು ಸವಾಲು ಹಾಕಿದರು. ಮೋದಿ ಹಾಗೂ ಬಿಜೆಪಿ ಸರ್ಕಾರ ದೇಶದಲ್ಲಿ ಸಮಾನತೆ ತರುವ ಕೆಲಸ ಮಾಡಲಿ ಎಂದರು.

‘ಬಿಜೆಪಿಯವರಿಗೆ ಬೆಂಕಿ ಹೆಚ್ಚುವುದು ಬಿಟ್ಟು ಬೇರೆ ಯಾವ ಕೆಲಸವೂ ಗೊತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ ನಾಗಮಂಗಲ ಗಲಭೆ ವಿಚಾರದಲ್ಲಿ ಸಾಂತ್ವನ ಹೇಳಿ ಜನರಲ್ಲಿ ಅರಿವು ಮೂಡಿಸುವ ಬದಲು ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಚಾಟಿ ಬೀಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.