ಕೊಪ್ಪಳ: ತಾಲ್ಲೂಕಿನ ಕರ್ಕಿಹಳ್ಳಿಯಲ್ಲಿ ಗುರು ಪೌರ್ಣಿಮೆ ಅಂಗವಾಗಿ ಮೃತ್ಯುಂಜಯೇಶ್ವರ ಕ್ಷೇತ್ರದಲ್ಲಿ ಭಾನುವಾರ ಮಧ್ಯಾಹ್ನ ಚಿದಂಬರೇಶ್ವರರ 21ನೇ ಮಹಾರಥೋತ್ಸವ ಸಾವಿರಾರು ಜನರ ನಡುವೆ ನೆರವೇರಿತು. ಭಕ್ತರು ಭಕ್ತಿಯಿಂದ ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಸಮರ್ಪಿಸಿದರು.

ಪೂರ್ವಭಾವಿಯಾಗಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಮಂಗಳವಾರ ಧಾರಣಸರಸ್ವತಿ ಹೋಮ, ಮಹಾಲಕ್ಷ್ಮಿ ಹೋಮ ಜರುಗಲಿವೆ.

ಕ್ಷೀರಾಭಿಷೇಕ, ತುಳಸಿ ಆರ್ಚನೆ, ಸತ್ಯನಾರಾಯಣ ವ್ರತ, ಮಹಾವಿಷ್ಣುಯಾಗ, ದತ್ತ ಮೂಲ ಮಂತ್ರದಿಂದ, ದತ್ತಾತ್ರೇಯ ಹೋಮ, ಸಪ್ತಶತಿ ಪಾರಾಯಣ, ನವಚಂಡಿಹೋಮ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆದವು. ಮಹಾರಥೋತ್ಸವದ ರಥಾಂಗ ಹೋಮ, ರಥ ಎಳೆಯುವುದು, ಆರತಿ, ನೈವೆದ್ಯ, ಅನ್ನಸಂತರ್ಪಣೆ ಮತ್ತು ಸಂಜೆ ಸಿಡಿಮದ್ದು ಸಂಭ್ರಮ ಕಂಡುಬಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.