ಕೊಪ್ಪಳ: ‘ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ನೀಡುವುದರ ಮೂಲಕ ಸಾರ್ವಜನಿಕರಿಗೆ ಈ ಯೋಜನೆಗಳ ಮಾಹಿತಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು’ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಬುಧವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಜಾರಿಗೆ ತಂದಿದೆ’ ಎಂದರು.

‘ಪ್ರತಿ ತಿಂಗಳು ನಡೆಯುವ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯ ನಡುವಳಿಗಳನ್ನು ಆಯಾ ತಿಂಗಳ 15ರ ಒಳಗೆ ಜಿಲ್ಲಾ ಸಮಿತಿಗೆ ಸಲ್ಲಿಸಿಬೇಕು. ಇದರಿಂದ ಜಿಲ್ಲಾ ಮಟ್ಟದಲ್ಲಿ ಚರ್ಚೆ ಮಾಡಲು ಅವಶ್ಯಕವಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲು ಅನುಕೂಲವಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡಲು ಸಿಡಿಪಿಒಗಳಿಗೆ ಸೂಚಿಸಬೇಕು’ ಎಂದರು.

ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ ಖಾದ್ರಿ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ, ಖಾಸೀಂ ಸಾಬ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾ ನಿರ್ದೇಶಕ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪ್ರಾಣೇಶ್, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರುಶುರಾಮ ವೈ.ಎಸ್. ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.