ಕಾರಟಗಿ (ಕೊಪ್ಪಳ ಜಿಲ್ಲೆ): ಯಾದಗಿರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ್ ಮೃತಪಟ್ಟ ಸುದ್ದಿ ಕಾಳ್ಗಿಚ್ಚಿನಂತೆ ಹರಡುತ್ತಿದದಂತೆಯೇ ಅವರ ತವರೂರು ತಾಲ್ಲೂಕಿನ ಸೋಮನಾಳ ಗ್ರಾಮದಲ್ಲಿ ಕಣ್ಣೀರ ಧಾರೆಯೇ ಹರಿಯಿತು. ಶನಿವಾರ ಸಂಜೆ ಮೃತದೇಹ ಗ್ರಾಮಕ್ಕೆ ಬಂದಾಗ ಜನಸಾಗರವೇ ಸೇರಿತ್ತು.

ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಬೃಹತ್ ಶಾಮಿಯಾನ ಹಾಕಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದ್ದರೆ, ಸುತ್ತಲಿನ ಗ್ರಾಮಗಳಿಂದ ವಿವಿಧೆಡೆಯಿಂದ ಬಂದಿದ್ದ ಜನ ಸೂತಕದ ಭಾವದಲ್ಲಿದ್ದರು.
.ಯಾದಗಿರಿ | ಪಿಎಸ್‌ಐ ಸಾವಿಗೆ ಶಾಸಕರ ಕಿರುಕುಳ ಕಾರಣ: ಪ್ರಗತಿಪರ ಸಂಘಟನೆ ಆರೋಪ .ಪಿಎಸ್‌ಐ ಸಾವಿಗೆ ಶಾಸಕರ ಕಿರುಕುಳ ಕಾರಣ; ಪ್ರಗತಿಪರ ಸಂಘಟನೆ ಆರೋಪ.
ವಿವಿಧೆಡೆಯಿಂದ ಬಂದಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಗುಂಡು ಹಾರಿಸಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಬಳ್ಳಾರಿ ವಲಯದ ಐಜಿಪಿ ಲೋಕೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಡಿವೈಎಸ್‌ಪಿ ಸಿದ್ದನಗೌಡ, ಇನ್‌ಸ್ಪೆಕ್ಟರ್ ಪ್ರದೀಪ ಬೀಸೆ ಸಹಿತ ವಿವಿಧ ಠಾಣೆಯ ಅಧಿಕಾರಿಗಳು ಗೌರವ ಸಲ್ಲಿಸಿದರು
.ಪಿಎಸ್‌ಐ ಸಾವಿಗೆ ಶಾಸಕರ ಕಿರುಕುಳ ಕಾರಣ; ಪ್ರಗತಿಪರ ಸಂಘಟನೆ ಆರೋಪ.ಚಿಕ್ಕೋಡಿ: ಮಹಿಳೆ ಮೇಲೆ ಪಿಎಸ್‌ಐ ಅನಿತಾ ರಾಠೋಡರಿಂದ ಹಲ್ಲೆ– ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.