ಕೊಪ್ಪಳ: ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಸರಿಯಾಗಿ ಸೌಲಭ್ಯಗಳನ್ನು ಕಲ್ಪಿಸದೇ ಸರ್ಕಾರ ಅವುಗಳನ್ನು ಕೊಲೆ ಮಾಡುತ್ತಿದೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರದ ಸಂಚಿಕೆಯಲ್ಲಿ ‘ಪ್ರಜಾವಾಣಿ’ಯ ಮುಖಪುಟದಲ್ಲಿ ಕುಷ್ಟಗಿಯ ‘ಸಾವಿರ ವಿದ್ಯಾರ್ಥಿನಿಯರಿಗೆ ಇರುವುದೊಂದೇ ಶೌಚಾಲಯ’ ವಿಶೇಷ ವರದಿ ಪ್ರಸ್ತಾಪಿಸಿದ ಅವರು ‘ಸರ್ಕಾರಿ ಕಾಲೇಜುಗಳಲ್ಲಿ ಬಡವರ ಮಕ್ಕಳು ಓದುತ್ತಾರೆ. ಅಲ್ಲಿ ಶೌಚಾಲಯ ನಿರ್ಮಿಸಲು ಸರ್ಕಾರಕ್ಕೆ ಏನು ದಾಡಿ’ ಎಂದು ಕಟುವಾಗಿ ಪ್ರಶ್ನಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡತನದ ಹಿನ್ನೆಲೆಯಿಂದ ಬಂದವರು. ಬಡವರ ಕಷ್ಟದ ಬಗ್ಗೆ ಅವರಿಗೆ ಗೊತ್ತಿದೆ. ವಿಶೇಷ ಕಾಳಜಿ ವಹಿಸಿ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
.ಕೊಟ್ಟ ಮಾತಿನಂತೆ ನಡೆಯದ ಕಾಂಗ್ರೆಸ್: ‘ಮುಖ್ಯಮಂತ್ರಿ’ ಚಂದ್ರು ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.