ಕೊಪ್ಪಳ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಜಿಲ್ಲೆಯ ಅಳವಂಡಿ ತಾಲ್ಲೂಕಿನ ಕವಲೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ವಿನಾಯಕ ದೇಸಾಯಿ (32) ಕೊಲೆಯಾದವರು. ಇವರ ಅಣ್ಣ ರಾಘವೇಂದ್ರ ದೇಸಾಯಿ ಕೊಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಡುವೆ ಹಲವು ವರ್ಷಗಳಿಂದ ಆಸ್ತಿಗಾಗಿ ಜಗಳ ನಡೆಯುತ್ತಿತ್ತು.

ರಾಘವೇಂದ್ರ ಹೊಲದಲ್ಲಿ ಬಿತ್ತನೆ ಮಾಡುವಾಗ ಅದನ್ನು ತಡೆಯಲು ವಿನಾಯಕ ತೆರಳಿದಾಗ ಘಟನೆ ನಡೆದಿದೆ. ಉದ್ರಿಕ್ತಗೊಂಡು ರಾಘವೇಂದ್ರ ಗುಂಡು ಹಾರಿಸಿದ್ದಾನೆ.

ಸ್ಥಳಕ್ಕೆ ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಭೇಟಿ ನೀಡಿ ಮಾಹಿತಿ ಪಡೆದರು. ಆರೋಪಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.