ಕೊಪ್ಪಳ: ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ತೀರ್ಮಾನ ಕೈಗೊಳ್ಳುಲಿದೆ. ಈಗಾಗಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವ ಕಾರಣ ಈ ಸ್ಥಾನದ ಬಗ್ಗೆ ಚರ್ಚೆಯೇ ಅನವಶ್ಯಕ’ ಎಂದು ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಬಿಜೆಪಿಯವರು ವಿರೋಧ ಪಕ್ಷದಲ್ಲಿರುವುದರಿಂದ ಏನೇ ಆಗಲಿ ವಿರೋಧವಾಗಿಯೂ ಮಾತನಾಡಬೇಕು. ಆ ಪಕ್ಷದವರು ಅದೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಬಂದು ಐದು ತಿಂಗಳಷ್ಟೇ ಆಗಿದೆ. ನಮ್ಮಲ್ಲಿ ಯಾರಿಗೂ ಅತೃಪ್ತಿ ಇಲ್ಲ. ಪಕ್ಷ ಜನಪರ ಕೆಲಸಗಳನ್ನು ಮಾಡುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಯಷ್ಟೇ’ ಎಂದರು.

‘ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿಗಮ ಮಂಡಳಿಗಳಿಗೆ ನೇಮಕ ಮಾಡುವುದು ಸಾಮಾನ್ಯ. ಅತೃಪ್ತರಿಗೆ ನಿಗಮ ಮಂಡಳಿಗಳ ಸ್ಥಾನಮಾನ ನೀಡಿ ಸಮಾಧಾನ ಪಡಿಸಲಾಗುತ್ತಿದೆ ಎನ್ನುವುದು ಸರಿಯಲ್ಲ. ಬಿಜೆಪಿಗೂ ಒಂದು ಹೈಕಮಾಂಡ್ ಇದೆ. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ. ಇದರಿಂದ ಬಿಜೆಪಿ ಎಷ್ಟೊಂದು ಕೆಳಮಟ್ಟಕ್ಕೆ ಹೋಗಿದೆ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.