2013ರಲ್ಲಿ ಮೊದಲ ಬಾರಿಗೆ ಹಿಟ್ನಾಳ ಶಾಸಕರಾದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. 2018ರಲ್ಲಿ ಎರಡನೇ ಬಾರಿಗೆ ಆಯ್ಕೆಯಾದಾಗ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆಗ ಹಿಟ್ನಾಳ ‘ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇಲ್ಲ. ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅನುದಾನವೇ ನೀಡುತ್ತಿಲ್ಲ’ ಎನ್ನುವ ಕಾರಣ ಮುಂದಿಡುತ್ತಿದ್ದರು. ಈಗ ಕ್ಷೇತ್ರದ ಮತದಾರರು ಮೂರನೇ ಬಾರಿಗೆ ಆಶೀರ್ವಾದ ಮಾಡಿದ್ದು, ಈ ಬಾರಿ ಕ್ಷೇತ್ರದಲ್ಲಿ ಬಾಕಿ ಉಳಿದ ಎಲ್ಲ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ.
ಹಿಟ್ನಾಳ ಹೋಬಳಿ ಮಟ್ಟದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಬಾಕಿ ಇವೆ. ನೀರಾವರಿ ಉದ್ದೇಶಕ್ಕಾಗಿ ಕೆರೆ ತುಂಬಿಸುವ ಯೋಜನೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಕಾಲೇಜು ಸ್ಥಾಪನೆ ಮತ್ತು ವಿದ್ಯಾರ್ಥಿಗಳ ಪ್ರಯಾಣಿಸಲು ಬಸ್ ಸೌಕರ್ಯ ಬೇಕಾಗಿದೆ. ಇಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಬೇಕುಹನುಮಂತಪ್ಪ ಬಸಿರಾಳ, ಲಿಂಗದಹಳ್ಳಿ
ಅಳವಂಡಿ ವ್ಯಾಪ್ತಿಯ ಕವಲೂರು ಬೆಟಗೇರಿ ಗ್ರಾಮದಲ್ಲಿ ಪಿಯು ಕಾಲೇಜು ಪ್ರಾರಂಭವಾಗಬೇಕು. ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಹೆಚ್ಚಾಗಬೇಕು. ಉತ್ತಮ ರಸ್ತೆ ಅಭಿವೃದ್ಧಿಗೆ ಶ್ರಮಿಸಬೇಕುಶಾರದಾ ಕುರಿ, ವಿದ್ಯಾರ್ಥಿನಿ
ಕೊಪ್ಪಳ ವಿ.ವಿ.ಗೆ ಜಿಲ್ಲಾ ಕೇಂದ್ರದಲ್ಲಿ ಜಾಗದ ವ್ಯವಸ್ಥೆ ಮಾಡಬೇಕು. ಅಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ಕೊಪ್ಪಳದಲ್ಲಿ ಇನ್ನೊಂದು ಪದವಿ ಕಾಲೇಜು ಆರಂಭಿಸಬೇಕಾಗಿದೆ. ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕಾಗಿದೆಗಂಗರಾಜ ಅಳ್ಳಳ್ಳಿ, ಎಐಡಿಎಸ್‌ಒ ಜಿಲ್ಲಾ ಸಂಚಾಲಕ
ಹುಲಿಗಿ ದೇವಸ್ಥಾನ ಮತ್ತು ಸುತ್ತಲಿನ ಪರಿಸರ ಸುಧಾರಿಸಬೇಕು. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಬಸ್ ನಿಲ್ದಾಣ ಶೌಚಾಲಯ ಸ್ನಾನಗೃಹ ಕೊರತೆ ಇದೆ. 10-14 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ಸ್ಮಶಾನದ ವ್ಯವಸ್ಥೆ ಇಲ್ಲ ವಾರದ ಸಂತೆಗೆ ಜಾಗದ ಕೊರತೆಯಿಂದ ಮುಖ್ಯರಸ್ತೆಯಲ್ಲಿ ಸಂತೆ ನಡೆಯುತ್ತಿದೆ ಇದಕ್ಕೆ ನಿರ್ದಿಷ್ಟ ಸ್ಥಳ ಗುರುತಿಸಬೇಕುಈ.ವೀರೇಶ್ ಹುಲಿಗಿ
ಅಳವಂಡಿ ವ್ಯಾಪ್ತಿಯ ಅನೇಕ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದೆಗೆಟ್ಟಿವೆ. ಅವುಗಳನ್ನು ಸರಿಪಡಿಸುವ ಕೆಲಸವಾಗಬೇಕು. ಬಡವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ಒದಗಿಸಬೇಕುನಾಗರಾಜ್ ಕಗ್ಗಲ್, ಕವಲೂರು
ಈ ಬಾರಿ ನಮ್ಮ ಪಕ್ಷದ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ನೀರಾವರಿ ಸೇರಿದಂತೆ ಕ್ಷೇತ್ರದಲ್ಲಿ ಬಾಕಿ ಉಳಿದ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು.ರಾಘವೇಂದ್ರ ಹಿಟ್ನಾಳ, ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.