ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

Published 23 ಜುಲೈ 2024, 16:16 IST
Last Updated 23 ಜುಲೈ 2024, 16:16 IST
ಅಕ್ಷರ ಗಾತ್ರ

ಕೊಪ್ಪಳ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡವಿಧಿಸಿ ಕೊಪ್ಪಳ ತ್ವರಿತ ವಿಲೇವಾರಿ ನ್ಯಾಯಾಲಯದ (ಪೋಕ್ಸೊ) ಹೆಚ್ಚುವರಿ ಜಿಲ್ಲಾ ಹಾಗೂ ಸಷೆನ್ಸ್‌ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ತೀರ್ಪು ನೀಡಿದ್ದಾರೆ.

ಬಾಲಕಿ ಸಂಬಂಧಿಯಾಗಿದ್ದ ಗಜೇಂದ್ರಗಡ ತಾಲ್ಲೂಕಿನ ನೆಲ್ಲೂರ ನಿವಾಸಿ ಕುಮಾರ ಚವ್ಹಾಣ ಎಂಬಾತ ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗನಾಳ ಗ್ರಾಮದಲ್ಲಿ ಬಾಲಕಿಯ ಮನೆಯಲ್ಲಿ ವಾಸವಾಗಿದ್ದನು. ಬಾಲಕಿ ಜೊತೆ ಸಲುಗೆಯಿಂದ ಇದ್ದ ಆತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಎರಡ್ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಹಿರಂಗಪಡಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ.

ಮದುವೆಯಾಗೋಣ ಎಂದು ಪುಸಲಾಯಿಸಿದ್ದ ಕುಮಾರ 2021ರ ಆಗಸ್ಟ್ 22ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂಗನಾಳ ಗ್ರಾಮದ ಮನೆಯಿಂದ ಬಾಲಕಿಯನ್ನು ಅಪಹರಿಸಿ ಮುಧೋಳ ತಾಲ್ಲೂಕಿನ ಮಳಲಿ ಗ್ರಾಮದ ಜಮೀನಿನ ತಗಡಿನ ಶೆಡ್ಡಿನಲ್ಲಿ ಎರಡೂವರೆ ತಿಂಗಳು ಬಂಧನದಲ್ಲಿರಿಸಿದ್ದ. ಅಲ್ಲಿಯೂ ಹಲವಾರು ಸಲ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT